ಹೆಬ್ಬಾಲೆಯಲ್ಲಿ ವಾಹನ ಡಿಕ್ಕಿಯಾಗಿ ಮಹಿಳೆ ಸಾವು

ಹೆಬ್ಬಾಲೆ ಬಳಿ ರಾಜ್ಯ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದ ಸ್ಥಳಕ್ಕೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕುಶಾಲನಗರ ವೃತ್ತ ನಿರೀಕ್ಷಕ ದಿನೇಶ್ ಕುಮಾರ್ ಹಾಗೂ ಸಂಚಾರ ಉಪನಿರೀಕ್ಷಕ ಗಣೇಶ್ ಇದ್ದರು.

Published on
ಕುಶಾಲನಗರ: ಹೆಬ್ಬಾಲೆ ಗ್ರಾಮದ ರಾಜ್ಯ ಹೆದ್ದಾರಿ ಬದಿಯಲ್ಲಿ ವಾಹನ ಡಿಕ್ಕಿಯಾದ ಪರಿಣಾಮ ಪಾದಚಾರಿ ಮಹಿಳೆ ಬುಧವಾರ ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಗ್ರಾಮದ ನಿವೃತ್ತ ಶಿಕ್ಷಕ ಪಾಲಾಕ್ಷ ಅವರ ಪತ್ನಿ ಮಂಜುಳಾ(50) ಸಾವಿಗೀಡಾಗಿದ್ದಾರೆ.
ಕೊಣನೂರು ಕಡೆಯಿಂದ ಕುಶಾಲನಗರದ ಕಡೆಗೆ ವೇಗವಾಗಿ ಬರುತ್ತಿದ್ದ ವಾಹನ ಆಟೋ ಒಂದನ್ನು ಹಿಂದಿಕ್ಕಿ ಮುಂದೆ ತೆರಳುತ್ತಿದ್ದಾಗ ರಸ್ತೆ ಬದಿಯಲ್ಲಿ ನಡೆದುಕೊಂಡು ಸಂತೆಗೆ ತೆರಳುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ರಭಸಕ್ಕೆ 50 ಅಡಿ ದೂರಕ್ಕೆ ಎಸೆಯಲ್ಪಟ್ಟ ಮಹಿಳೆ ಸ್ಥಳದಲ್ಲಿ ತೀವ್ರ ರಕ್ತಸ್ರಾವವಾಗಿದೆ. ಬಳಿಕ ಸ್ಥಳೀಯರು ಕುಶಾಲನಗರ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರಾದರೂ ಕೊನೆಯುಸಿರೆಳೆದರು ಎನ್ನಲಾಗಿದೆ.
ಕುಶಾಲನಗರ ಸಂಚಾರ ಪೊಲೀಸರು ದೂರು ದಾಖಲಿಸಿಕೊಂಡು ವಾಹನ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಕೊಡಗು ಪೋಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಕುಶಾಲನಗರ ಡಿವೈಎಸ್ಪಿ ಚಂದ್ರಶೇಖರ್, ವೃತ್ತ ನಿರೀಕ್ಷಕ ದಿನೇಶ ಕುಮಾರ್, ಸಂಚಾರ ಉಪನಿರೀಕ್ಷಕ ಗಣೇಶ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net