ಸ್ಥಳೀಯರ ಪ್ರಕಾರ, ಕಳೆದ ಕೆಲವು ವಾರಗಳಿಂದ ಕಾಡಾನೆಗಳು ನಿರಂತರವಾಗಿ ಗ್ರಾಮ ವ್ಯಾಪ್ತಿಯಲ್ಲಿ ಸಂಚರಿಸುತ್ತಿದ್ದು, ಬೆಳೆ ನಾಶಪಡಿಸುವುದರ ಜತೆಗೆ ಜನರ ಜೀವಕ್ಕೂ ಅಪಾಯ ಉಂಟು ಮಾಡುತ್ತಿವೆ. ಅರಣ್ಯ ಇಲಾಖೆ ಈ ಹಿಂದೆ ಕೆಲವು ಆನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ನಡೆಸಿದ್ದರೂ, ಮತ್ತೆ ಆನೆಗಳು ಗ್ರಾಮ ವ್ಯಾಪ್ತಿಗೆ ಮರಳಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.