ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ನ ನಿರ್ದೇಶಕರಾದ ಕೆ.ಟಿ.ಪರಮೇಶ್, ಬಲ್ಲಾರಂಡ ಮಣಿ ಉತ್ತಪ್ಪ, ಎ.ಸಿ.ಕುಶಾಲಪ್ಪ, ಎಂ.ಟಿ.ಸುಬ್ಬಯ್ಯ, ವಿ.ಸಿ.ಅಮೃತ್, ಎಂ.ಎಂ.ಶ್ಯಾಮಲಾ, ಎಸ್.ಆರ್.ಸುನಿಲ್ ರಾವ್ ಉಪಸ್ಥಿತರಿದ್ದರು. ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ನಿರ್ದೇಶಕ ಹೆಚ್.ಕೆ.ಮಾದಪ್ಪ ಸ್ವಾಗತಿಸಿದರು. ಸಿಬ್ಬಂದಿ ಆರ್.ಮಂಜುಳಾ ಪ್ರಾರ್ಥಿಸಿದರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ನಿರೂಪಿಸಿ, ವಂದಿಸಿದರು.