ಕೊಡವ ಸಮಾಜ ಸಭಾಂಗಣದಲ್ಲಿ ನಡೆದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅಜ್ಜಿಕುಟ್ಟಿರ.ಎಸ್.ಪೊನ್ನಣ್ಣ ಮಾತನಾಡಿದರು. ವಿಖ್ಯಾತನಂದ ಸ್ವಾಮೀಜಿ, ರಮಾನಾಥ್ ಬೇಕಲ್ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ನಾಡಿನ ಹಿತಕ್ಕಾಗಿ ಒಗ್ಗಟ್ಟಿನಿಂದ ಕೆಲಸ ಮಾಡಿ
ಮಡಿಕೇರಿ: ನಾಡಿನ ಹಿತಕ್ಕೆ ಎಲ್ಲಾ ಸಮಾಜದವರು ಒಗ್ಗಟ್ಟಿನಿಂದ ಕೆಲಸ ಮಾಡುವಂತಾಗಬೇಕು ಎಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ.ಎಸ್.ಪೊನ್ನಣ್ಣ ಹೇಳಿದರು.
ಕೊಡವ ಸಮಾಜ ಸಭಾಂಗಣದಲ್ಲಿ ಬಿಲ್ಲವ ಸಮುದಾಯದವರು ಭಾನುವಾರ ಆಯೋಜಿಸಿದ ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ಮನರಂಜನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಾಡು ಸುಭಿಕ್ಷೆ ಹಾಗೂ ಸಮೃದ್ಧಿಯಾಗಬೇಕಾದರೆ ಎಲ್ಲಾ ಸಮಾಜದವರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ನಾಡಿನ ಪ್ರತಿಯೊಂದು ಸಮುದಾಯದವರಿಗೆ ಅವರದ್ದೇಯಾದ ಜಾಗಯಿರುವ ಅವಶ್ಯಕತೆಯನ್ನು ತಾನು ಮನಗಂಡು ಬಿಲ್ಲವ ಸಮಾಜದವರ ಮನವಿಗೆ ಮನ್ನಣೆ ನೀಡಿ ಈ ಜಾಗವನ್ನು ಮಂಜೂರು ಮಾಡಿಸಿರುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಬಿಲ್ಲವ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಮಾಡಲಾಯಿತು. ನಂತರ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ಮನರಂಜನ ಕಾರ್ಯಕ್ರಮ ನಡೆಯಿತು.
ಕಾಂಗ್ರೆಸ್ ನಾಯಕರು ಹಾಗೂ ಬಿಲ್ಲವ ಸಮಾಜದ ಮುಖಂಡ ಅಪ್ರು ರವೀಂದ್ರ, ವಿಖ್ಯಾತನಂದ ಸ್ವಾಮೀಜಿ, ಬಿಲ್ಲವ ಸಮಾಜದ ಅಧ್ಯಕ್ಷೆ ಲೀಲಾವತಿ, ಕೆಪಿಸಿಸಿ ಸದಸ್ಯರಾದ ರಮಾನಾಥ್ ಬೇಕಲ್, ಹರೀಶ್ ಕುಮಾರ್ ಹಾಗೂ ಸಂಘದ ಸದಸ್ಯರು, ಪದಾಧಿಕಾರಿಗಳು ಹಾಗೂ ಸಮುದಾಯದವರು ಉಪಸ್ಥಿತರಿದ್ದರು.