ಹಿಂದೂ ಸಮಾಜದ ಬಲವರ್ಧನೆಗೆ ಶ್ರಮಿಸಿ

ಕುಶಾಲನಗರದ ಹಿಂದೂ ಸಂಗಮ ಆಯೋಜನಾ ಸಮಿತಿ ಭಾನುವಾರ ನಗರದಲ್ಲಿ ಆಯೋಜಿಸಿದ್ದ ಹಿಂದೂ ಸಂಗಮ ಸಭಾ ಕಾರ್ಯಕ್ರಮದಲ್ಲಿ ರವೀಂದ್ರ ಪುತ್ತೂರು ಮಾತನಾಡಿದರು. ಟಿ.ಆರ್.ಶರವಣಕುಮಾರ್, ದೇವಿ ಪ್ರಸಾದ್, ವಿಶ್ವಜ್ಞಾನಿ ಡಾ.ಅಂಬೇಡ್ಕರ್ ಸಂಘದ ಅಧ್ಯಕ್ಷ ಲೋಕೇಶ್ ಪುಂಡಾರಿ, ಸಾಹಿತಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಮತ್ತಿತರರಿದ್ದರು.
ಕುಶಾಲನಗರದ ಹಿಂದೂ ಸಂಗಮ ಆಯೋಜನಾ ಸಮಿತಿ ಭಾನುವಾರ ನಗರದಲ್ಲಿ ಆಯೋಜಿಸಿದ್ದ ಹಿಂದೂ ಸಂಗಮ ಸಭಾ ಕಾರ್ಯಕ್ರಮದಲ್ಲಿ ರವೀಂದ್ರ ಪುತ್ತೂರು ಮಾತನಾಡಿದರು. ಟಿ.ಆರ್.ಶರವಣಕುಮಾರ್, ದೇವಿ ಪ್ರಸಾದ್, ವಿಶ್ವಜ್ಞಾನಿ ಡಾ.ಅಂಬೇಡ್ಕರ್ ಸಂಘದ ಅಧ್ಯಕ್ಷ ಲೋಕೇಶ್ ಪುಂಡಾರಿ, ಸಾಹಿತಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಮತ್ತಿತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪುತ್ತೂರಿನ ಶ್ರೀ ವಿವೇಕಾನಂದ ಕಾಲೇಜು ಅಧ್ಯಕ್ಷ ರವೀಂದ್ರ ಪತ್ತೂರು ಹೇಳಿಕೆ
  • ಹಿಂದೂ ಸಂಗಮದಲ್ಲಿ ರವೀಂದ್ರ ಪುತ್ತೂರು ಆಶಯ
ಕುಶಾಲನಗರ: ಹಿಂದೂಗಳು ಒಗ್ಗೂಡಿ ಸಂಘಟಿತರಾಗುವ ಮೂಲಕ ಹಿಂದೂ ಸಂಸ್ಕೃತಿ, ಪರಂಪರೆಗಳನ್ನು, ಕೌಟುಂಬಿಕ ಮೌಲ್ಯಗಳನ್ನು ಸಂರಕ್ಷಿಸಬೇಕು. ಈ ಮೂಲಕ ಹಿಂದೂ ಸಮಾಜದ ಬಲವರ್ಧನೆಗೆ ಶ್ರಮಿಸಬೇಕು ಎಂದು ಹಿಂದೂ ಮುಖಂಡರಾದ ಪುತ್ತೂರಿನ ಶ್ರೀ ವಿವೇಕಾನಂದ ಕಾಲೇಜು ಅಧ್ಯಕ್ಷ ರವೀಂದ್ರ ಪತ್ತೂರು ಕರೆ ಕೊಟ್ಟರು.
ಕುಶಾಲನಗರದ ಹಿಂದೂ ಸಂಗಮ ಆಯೋಜನಾ ಸಮಿತಿ ಭಾನುವಾರ ನಗರದಲ್ಲಿ ಆಯೋಜಿಸಿದ್ದ ಹಿಂದೂ ಸಂಗಮ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಹಿಂದೂ ಸಮಾಜದ ಸಂಘಟನೆಗೆ ಗ್ರಾಮಗಳಲ್ಲಿ ಸಮಿತಿ ರಚನೆ ಮಾಡುವ ಮೂಲಕ ಜಾಗೃತಿ ಮೂಡುತ್ತಿರುವುದು ಹೆಮ್ಮೆಯ ಸಂಗತಿ. ಆದರೆ, ಹಿಂದೂಗಳೆಲ್ಲ ಒಂದೇ ಎಂಬ ಭಾವನೆಯೊಂದಿಗೆ ಜಾತಿ ಪದ್ಧತಿ ನಿರ್ಮೂಲನೆ ಮಾಡಬೇಕು ಎಂದರು.
ಸ್ವದೇಶಿ ವಸ್ತುಗಳಿಗೆ ಆದ್ಯತೆ ಕೊಡಬೇಕು. ಹಿಂದುತ್ವದ ಅರ್ಥ ಮಾಡಿಕೊಂಡವರು ಜಗತ್ತಿನಾದ್ಯಂತ ಬೇರೆ ಬೇರೆ ರಂಗಗಳಲ್ಲಿ ಬೆಳೆಯುತ್ತಿದ್ದಾರೆ. ಆದರೆ, ಕೆಲವರು ವಿನಾಶಕ್ಕೆ ಸಂಚು ರೂಪಿಸುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಆದರ್ಶಗಳ ಪಾಲನೆ ಹಿಂದೂಗಳ ಹೆಮ್ಮೆ. ರಾಷ್ಟ್ರೀಯ ಸ್ವಯಂ ಸೇವಾ ಸಂಘಕ್ಕೆ ನವಚೈತನ್ಯ ತಂದು ಕೊಟ್ಟ ಮಹಾ ಚೇತನ ಎಂದು ರವೀಂದ್ರ ಬಣ್ಣಿಸಿದರು.
ಹಿಂದೂಗಳು ಇರುವ ಜಗತ್ತಿನ ಏಕೈಕ ರಾಷ್ಟ್ರ ಭಾರತ. ಹಿಂದೂ ಸಮಾಜ ಯಾವತ್ತೂ ಯಾರ ಜತೆಯೂ ಯುದ್ಧಕ್ಕಿಳಿಯಲಿಲ್ಲ. ಭಾರತೀಯ ಸಹೋದರಿಯರ ಸಿಂಧೂರ ಅಳಿಸಿದ ಉಗ್ರರನ್ನು ನಮ್ಮ ಸೈನಿಕರು ಸದೆ ಬಡಿದದ್ದು ಇತಿಹಾಸ. ಪ್ರಧಾನಿ ನರೇಂದ್ರ ಮೋದಿಯ ಕನಸಿನ ವಿಕಸಿತ ಭಾರತದ ಪರಿಕಲ್ಪನೆಗಳಾದ ವಿಶ್ವಶಕ್ತಿಯಾಗುವ ಮೂಲಕ ವಿಶ್ವಗುರು ಆಗುವುದಾಗಿದೆ ಎಂದು ರವೀಂದ್ರ ಪುತ್ತೂರು ಹೇಳಿದರು.
ಕುಶಾಲನಗರದ ಕೃಷಿ ಪತ್ತಿನ ಮತ್ತು ಕೈಗಾರಿಕೋದ್ಯಮಿಗಳ ಸಹಕಾರ ಸಂಘದ ಅಧ್ಯಕ್ಷ ಟಿ.ಆರ್.ಶರವಣಕುಮಾರ್ ಮಾತನಾಡಿ, ಪುರಾತನವಾದ 4 ಸಾವಿರ ವರ್ಷಗಳ ಹಳೆಯ, ಋಷಿಮುನಿಗಳು, ಮಹರ್ಷಿಗಳು ಇರುವಂತಹ ಶ್ರೇಷ್ಠ ಸನಾತನ ಧರ್ಮದ ಸಂರಕ್ಷಣೆ ಅಗತ್ಯವಿದೆ. ಯೋಗವನ್ನು ಪ್ರಪಂಚಕ್ಕೆ ಪರಿಚಯಿಸಿದ ದೇಶ ನಮ್ಮದು. ಪರಿಸರ ಸಂರಕ್ಷಣೆಗೂ ಹಿಂದೂ ಧರ್ಮದ ಧಾರ್ಮಿಕ ಪದ್ಧತಿಗಳಿಗೂ ಅವಿನಾಭಾವ ಸಂಬಂಧವಿದೆ. ಭಾರತೀಯ ಸಂಸ್ಕೃತಿಯನ್ನು ಇಂದಿನ ಯುವಕ ಯುವತಿಯರು ಆರಾಧಿಸುವ ಮೂಲಕ ಹಿರಿಯರ ಆಚರಣೆಗಳನ್ನು ಗೌರವಿಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಕೆಲಸವಾಗಬೇಕಿದೆ ಎಂದರು.
ಹಿಂದೂ ಸಂಗಮ ಆಯೋಜನಾ ಸಮಿತಿ ಸಂಯೋಜಕ ಜಿ.ಎಲ್.ನಾಗರಾಜು, ಸಾಹಿತಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ, ದೇವಿ ಪ್ರಸಾದ್, ವಿಶ್ವಜ್ಞಾನಿ ಡಾ.ಅಂಬೇಡ್ಕರ್ ಸಂಘದ ಅಧ್ಯಕ್ಷ ಲೋಕೇಶ್ ಪುಂಡಾರಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net