ಮಳೆ ನಡುವೆಯೂ ಕಾರ್ಮಿಕರ ಹೋರಾಟ

ಸೋಮವಾರಪೇಟೆ ತಾಲೂಕಿನ ಮಾದಾಪುರ ಗ್ರಾಮ ಪಂಚಾಯಿತಿಯ ಕುಂಬೂರು ಗ್ರಾಮದ ಸ.ನಂ.125/1 ಪೈಸಾರಿ ಜಾಗದಲ್ಲಿ ನಿವೇಶನಕ್ಕಾಗಿ ಅಹೋರಾತ್ರಿ ಧರಣಿ ನಡೆಸುತ್ತಿರುವುದು.
ಸೋಮವಾರಪೇಟೆ ತಾಲೂಕಿನ ಮಾದಾಪುರ ಗ್ರಾಮ ಪಂಚಾಯಿತಿಯ ಕುಂಬೂರು ಗ್ರಾಮದ ಸ.ನಂ.125/1 ಪೈಸಾರಿ ಜಾಗದಲ್ಲಿ ನಿವೇಶನಕ್ಕಾಗಿ ಅಹೋರಾತ್ರಿ ಧರಣಿ ನಡೆಸುತ್ತಿರುವುದು.
Published on

ಪ್ರಮುಖ ಮುಖ್ಯಾಂಶಗಳು

  • ನಿವೇಶನ ನೀಡುವಂತೆ ಮುಂದುವರಿದ ಧರಣಿ
ಸೋಮವಾರಪೇಟೆ: ನಿವೇಶನ ರಹಿತ ಬಡವರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ ಕರ್ನಾಟಕ ಬಹುಜನ ಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ಕುಂಬೂರು ಗ್ರಾಮದ ಪೈಸಾರಿ ಜಾಗದಲ್ಲಿ ವಸತಿರಹಿತ ಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿ ಧರಣಿ 10ನೇ ದಿನಕ್ಕೆ ಕಾಲಿಟ್ಟಿದೆ.
ಶನಿವಾರ ರಾತ್ರಿ ಸುರಿದ ಮಳೆಯಿಂದ ಧರಣಿ ನಿರತರು ಸಮಸ್ಯೆ ಎದುರಿಸಿದ್ದಾರೆ. ಟಾರ್ಪಾಲ್ ಹೊದಿಕೆಯ ಶೆಡ್ ಮೇಲೆ ನೀರು ಸಂಗ್ರಹವಾಗಿ, ಮಹಿಳೆಯರು ಮಕ್ಕಳು, ವೃದ್ಧರು ನಿದ್ದೆಗೆಡುವಂತಾಯಿತು.
ಕೆಲವರಿಗೆ ಅರೋಗ್ಯ ಸಮಸ್ಯೆ ಎದುರಾಗಿದೆ ಎಂದು ಸಂಘಟನೆಯ ಅಧ್ಯಕ್ಷ ಕೆ.ಮೊಣ್ಣಪ್ಪ ನೋವು ತೋಡಿಕೊಂಡರು. ನಮ್ಮ ಬೇಡಿಕೆಯನ್ನು ಈಡೇರಿಸಲು ಸರ್ಕಾರ ಮಟ್ಟದಿಂದ ಸ್ಪಂದನೆ ಸಿಗುತ್ತಿಲ್ಲ. ಏನೇ ಆಡೆತಡೆಗಳು ಬಂದರೂ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net