ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಅಗತ್ಯ

ಮಾಲಂಬಿ ವಾಲ್ಮೀಕಿ ವಸತಿ ಶಾಲೆಯಲ್ಲಿ ಪಡವಲಹಿಪ್ಪೆ ದೇವೇಗೌಡ ಪ್ರಥಮದರ್ಜೆ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಹಮ್ಮಿಕೊಂಡಿರುವ ಸಮಾಜ ಸೇವಾ ಶಿಬಿರದಲ್ಲಿ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ಕೃಷ್ಣ ರಾಜ್ ಮಾತನಾಡಿದರು. ನಿವೃತ್ತ ಪ್ರಾಂಶುಪಾಲ ನಾರಾಯಣ ಪ್ರಾಧ್ಯಾಪಕ ಭುವನೇಂದ್ರ, ದೈಹಿಕ ಶಿಕ್ಷಣ ಶಿಕ್ಷಕ ಲಕ್ಷ್ಮೀಶ ಇದ್ದರು.

Published on
ಶನಿವಾರಸಂತೆ : ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಇರಬೇಕು ಎಂದು ಶನಿವಾರಸಂತೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ಕೃಷ್ಣ ರಾಜ್ ಅಭಿಪ್ರಾಯ ಪಟ್ಟರು.
ಮಾಲಂಬಿ ವಾಲ್ಮೀಕಿ ವಸತಿ ಶಾಲೆಯಲ್ಲಿ ಪಡವಲಹಿಪ್ಪೆ ದೇವೇಗೌಡ ಪ್ರಥಮದರ್ಜೆ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಹಮ್ಮಿಕೊಂಡಿರುವ ಸಮಾಜ ಸೇವಾ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು. ಇಂದು ಹಣದ ವ್ಯಾಮೋಹ ಹೆಚ್ಚಾಗಿದೆ. ಸೈಬರ್ ವಂಚನೆ ವ್ಯಾಪಕವಾಗಿದೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕಾದ ಸ್ಥಿತಿ ಇದೆ. ಪೊಲೀಸ್ ಠಾಣೆಗಳು ಜನ ಸ್ನೇಹಿ ಕೇಂದ್ರಗಳಾಗಿದ್ದು, ಸಮಸ್ಯೆ ಬಂದಾಗ ಭಯಪಡದೇ ದೂರು ನೀಡಿ ಎಂದರು.
ನಿವೃತ್ತ ಪ್ರಾಂಶುಪಾಲ ನಾರಾಯಣ ಮಾತನಾಡಿ ಯುವಜನರು ಅಪರಾಧ ಚಟುವಟಿಕೆಯಲ್ಲಿ ತೊಡಗಿರುವುದು ದುರಂತ ಎಂದರು. ಕಾನೂನು ಮತ್ತು ನಿಯಮ ಉಲ್ಲಂಘಿಸಿದರೆ ದುರಂತ ಖಚಿತ. ಈ ಬಗ್ಗೆ ಅರಿವು ಇರಬೇಕು ಎಂದರು. ದೇವೇಗೌಡ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ್ ಮಾತನಾಡಿ, ಪಾಲಕರು ಮಕ್ಕಳ ಮೇಲೆ ಹದ್ದಿನ ಕಣ್ಣು ಇಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದರು.
ಮಕ್ಕಳೊಂದಿಗೆ ನಾವು ಸ್ನೇಹಿತರಂತೆ ಇರಬೇಕು. ಆಗ ಮಾತ್ರ ಮಕ್ಕಳ ಮನೋಭಾವ ತಿಳಿಯಲು ಸಾಧ್ಯ ಎಂದರು. ಪ್ರಾಧ್ಯಾಪಕ ಭುವನೇಂದ್ರ, ದೈಹಿಕ ಶಿಕ್ಷಣ ಶಿಕ್ಷಕ ಲಕ್ಷ್ಮೀಶ ಮಾತನಾಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net