ಸುಟ್ಟ ಗಾಯಗಳ ಸಮಗ್ರ ಆರೈಕೆ ಬಗ್ಗೆ ಕಾರ್ಯಾಗಾರ

ಸುಟ್ಟ ಗಾಯಗಳ ಸಮಗ್ರ ಆರೈಕೆ ಮತ್ತು ಮುಖದ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸೆ ಬಗ್ಗೆ ಕಾರ್ಯಾಗಾರವನ್ನು ಗಣ್ಯರು ಉದ್ಘಾಟಿಸಿದರು. ನಿತಿನ್ ಚಕ್ಕಿ, ಕರಿಸ್ಸಾ ಬೋಪಣ್ಣ, ಡಾ.ಎ.ಜೆ.ಲೋಕೇಶ್ ಇತರರಿದ್ದರು.
ಸುಟ್ಟ ಗಾಯಗಳ ಸಮಗ್ರ ಆರೈಕೆ ಮತ್ತು ಮುಖದ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸೆ ಬಗ್ಗೆ ಕಾರ್ಯಾಗಾರವನ್ನು ಗಣ್ಯರು ಉದ್ಘಾಟಿಸಿದರು. ನಿತಿನ್ ಚಕ್ಕಿ, ಕರಿಸ್ಸಾ ಬೋಪಣ್ಣ, ಡಾ.ಎ.ಜೆ.ಲೋಕೇಶ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸುಟ್ಟ ಗಾಯಗಳ ಸಮಗ್ರ ಆರೈಕೆ ಬಗ್ಗೆ ಕಾರ್ಯಾಗಾರ
ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಸಭಾಂಗಣದಲ್ಲಿ ಸಾಮಾನ್ಯ ಶಸ್ತ್ರಚಿಕಿತ್ಸಾ ವಿಭಾಗ ಮತ್ತು ತುರ್ತು ಚಿಕಿತ್ಸಾ ವಿಭಾಗದ ಸಹಯೋಗದಲ್ಲಿ ಸುಟ್ಟ ಗಾಯಗಳ ಸಮಗ್ರ ಆರೈಕೆ ಮತ್ತು ಮುಖದ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸೆ ಬಗ್ಗೆ ಕಾರ್ಯಾಗಾರ ನಡೆಯಿತು.
ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಉಪ ವಿಭಾಗಧಿಕಾರಿ ನಿತಿನ್ ಚಕ್ಕಿ ಅವರು, ಸುಟ್ಟ ಗಾಯಗಳಿಗೆ ಪ್ರಾಥಮಿಕ ಹಂತದಲ್ಲಿಯೇ ಉತ್ತಮ ಚಿಕಿತ್ಸೆ ನೀಡುವುದು ಅಗತ್ಯ. ಆರಂಭಿಕ ಚಿಕಿತ್ಸೆದಿಂದ ಪುನರ್ವಸತಿ ವರೆಗೆ ವ್ಯವಸ್ಥಿತ ರೀತಿಯ ನಿರ್ವಹಣೆ ಬಗ್ಗೆ ಚರ್ಚೆ ಪ್ರಾಯೋಗಿಕವಾಗಿ ಉಪಯುಕ್ತವಾಗಿದೆ ಎಂದು ಅಭಿಪ್ರಾಯಪಟ್ಟರು.
ಮಿಸ್ ಟೀನ್ ಯೂನಿವರ್ಸ್ ಇಂಡಿಯಾ ೨೦೨೪ ಕರಿಸ್ಸಾ ಬೋಪಣ್ಣ, ತಮ್ಮ ಫ್ಯಾಷನ್ ಡಿಸೈನಿಂಗ್ ವಿದ್ಯಾಭ್ಯಾಸದ ಅನುಭವ ಹಂಚಿಕೊಂಡು, ವೈದ್ಯಕೀಯ ವಿದ್ಯಾರ್ಥಿಗಳ ಪರಿಶ್ರಮವನ್ನು ಶ್ಲಾಘಿಸಿದರು. ಜೀವನದಲ್ಲಿ ಮನಸ್ಸು ಕುಗ್ಗಿದಾಗ ವೈದ್ಯಕೀಯ ಕ್ಷೇತ್ರವನ್ನು ಆಯ್ಕೆ ಮಾಡಿದ ಉದ್ದೇಶವನ್ನು ನೆನಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು.
ಟ್ರಸ್ಟ್‌ವೆಲ್ ಆಸ್ಪತ್ರೆಯ ಓರೋ-ಫೇಷಿಯಲ್ ಮತ್ತು ಪ್ಲಾಸ್ಟಿಕ್ ಸರ್ಜರಿ ಸಲಹೆಗಾರರಾದ ಡಾ.ವಿಶ್ವಾಸ್ ವಿಜಯದೇವ್ ಅವರು, ಮುಖದ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸೆಯ ಒಳನೋಟಗಳು ವಿಷಯದ ಕುರಿತು ಉಪನ್ಯಾಸ ನೀಡಿದರು. ಸಂಸ್ಥೆಯ ಸಾಮಾನ್ಯ ಶಸ್ತ್ರಚಿಕಿತ್ಸಾ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಎಸ್.ಚಂದ್ರಶೇಖರ್ ಅವರು ಸುಟ್ಟ ಗಾಯಗಳ ಪ್ರಾಥಮಿಕ ಮೌಲ್ಯಮಾಪನ ಮತ್ತು ತುರ್ತು ನಿರ್ವಹಣೆ ಕುರಿತು ಮಾತನಾಡಿದರು.
ಕಾರ್ಯಾಗಾರದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಡೀನ್ ಮತ್ತು ನಿರ್ದೇಶಕ ಡಾ.ಎ.ಜೆ.ಲೋಕೇಶ್, ಪ್ರಾಂಶುಪಾಲರಾದ ಡಾ.ವಿಶಾಲ್ ಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಂಜುಂಡಯ್ಯ, ಸಮುದಾಯ ವೈದ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ರಾಮಚಂದ್ರ ಕಾಮತ್, ಶಸ್ತ್ರ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರಾದ ಡಾ.ಪ್ರವೀಣ್ ಕುಮಾರ್, ತುರ್ತು ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕ ಡಾ.ಮೋಹನ್ ಅಪ್ಪಾಜಿ, ಸ್ಥಾನೀಯ ವೈದ್ಯಾಧಿಕಾರಿಗಳಾದ ಡಾ.ಅಭಿನಂದನ್, ಸ್ಥಾನೀಯ ವೈದ್ಯಾಧಿಕಾರಿಗಳಾದ ಡಾ.ಧನಂಜಯ ಕುಮಾರ್ ಇತರರಿದ್ದರು. ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಯ ವೈದ್ಯರು ಇತರೆ ಜಿಲ್ಲೆಯ ಆಸ್ಪತ್ರೆಗಳ ವೈದ್ಯರು ಸ್ನಾತಕೋತ್ತರ ವೈದ್ಯರು, ಇಂಟರ್ನ್ಸ್ ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ನಂತರ ಕೊ.ವೈ.ವಿ.ಸಂಸ್ಥೆ ಮಡಿಕೇರಿಯಲ್ಲಿ ಆಂಕಾಲಜಿ ವಿಭಾಗದ ಉದ್ಘಾಟನೆಯನ್ನು ಡಾ.ದಿವಿಯಾ ಕರಿಯಪ್ಪ ಹಾಗೂ ಡಾ.ಮುಖೇಶ್ ಅವರಿಂದ ನೆರವೇರಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net