ಪುರಾತತ್ವ ಇಲಾಖೆಯ ಶಿಲ್ಪಕಲೆಗಳ ಛಾಯಾಚಿತ್ರ, ಕೊಡಗಿನ ಪರಂಪರೆಯ ಛಾಯಾಚಿತ್ರ, ಪುರಾತನ ವಸ್ತುಗಳ ಪ್ರದರ್ಶನ ಈ ಸಂದರ್ಭ ನಡೆದವು. ವಂದೇ ಮಾತರಂ ಮತ್ತು ಭಾರತದ ಸ್ವಾತಂತ್ರ‍್ಯ ಚಳವಳಿಯ ಕುರಿತು ರಸಪ್ರಶ್ನೆ ಸ್ಪರ್ಧೆ, ಶಾಲಾಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ, ಕೊಡಗಿನ ಪ್ರಾದೇಶಿಕ ಇತಿಹಾಸ ಕುರಿತು ವಿಶೇಷ ಉಪನ್ಯಾಸ, ಕೊಡಗಿನ ಜಾನಪದ ಗೀತೆಯ ಕುರಿತು ವಿಶೇಷ ಕಾರ್ಯಕ್ರಮ, ವಂದೇ ಮಾತರಂ ಸಾಮೂಹಿಕ ಗಾಯನ, ಪಾರಂಪರಿಕ ನಡಿಗೆ ಹಾಗೂ ಇತರ ಕಾರ್ಯಕ್ರಮಗಳು ಏರ್ಪಾಡಾಗಿದ್ದವು.