ವಿರಾಜಪೇಟೆಯಿಂದ ಮಡಿಕೇರಿಗೆ ತೆರಳುತ್ತಿದ್ದ ಖಾಸಗಿ ಬಸ್ ಕಕ್ಕಬೆ-ನೆಲಜಿ ಸಂಪರ್ಕ ರಸ್ತೆಯಲ್ಲಿ ತೆರಳುವಾಗ ಅವಘಡ ಸಂಭವಿಸಿದೆ. ಕಿರಿದಾದ ರಸ್ತೆಯಲ್ಲಿ ಎದುರುಗಡೆಯಿಂದ ಬರುತ್ತಿರುವ ವಾಹನಕ್ಕೆ ದಾರಿ ಬಿಡುವ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿ ಹೂತುಹೋಗಿದೆ. ಇದರಿಂದಾಗಿ ಪ್ರಯಾಣಿಕರು ಕೆಲಕಾಲ ಆತಂಕಗೊಂಡಿದ್ದರು. ನಂತರ ಟ್ರ್ಯಾಕ್ಟರ್ ಮೂಲಕ ಬಸ್ ಎಳೆದು ಮೇಲೆತ್ತಲಾಯಿತು.