ಆರೋಗ್ಯ ಪಾಲನೆಗೆ ಗಮನ ನೀಡಿ

 ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಆಶ್ರಮ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ರಾಮಕೃಷ್ಣ ಆಶ್ರಮದ ಶ್ರೀ ಪರಹಿತಾನಂದ ಸ್ವಾಮೀಜಿ ಮತ್ತಿತರರು ಹಾಜರಿದ್ದರು.

Published on
ಸಿದ್ದಾಪುರ : ಆರೋಗ್ಯ ಪಾಲನೆಗೆ ಎಲ್ಲರೂ ಗಮನ ನೀಡಬೇಕು ಎಂದು ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಸಲಹೆ ನೀಡಿದರು.
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಪೊನ್ನಂಪೇಟೆ ಶ್ರೀ ರಾಮಕೃಷ್ಣ ಆಶ್ರಮ ಸಭಾಂಗಣದಲ್ಲಿ ಆಯೋಜಿಸಿದ್ದ ಯೋಗ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯೋಗಕ್ಕೆ ಪೌರಾಣಿಕ ಹಿನ್ನೆಲೆಯೂ ಇದೆ. ಯೋಗಾಭ್ಯಾಸವು ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತದೆ ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ವಿಶ್ವದಾದ್ಯಂತ ಯೋಗಕ್ಕೆ ವ್ಯಾಪಕ ಮನ್ನಣೆ ದೊರೆತಿದ್ದು, ಜನರ ಆರೋಗ್ಯ ಕಾಪಾಡುವಲ್ಲಿ ಅದು ಪ್ರಮುಖ ಪಾತ್ರ ವಹಿಸುತ್ತಿದೆ. ಪ್ರತಿಯೊಬ್ಬರೂ ನಿಯಮಿತವಾಗಿ ಯೋಗಾಭ್ಯಾಸ ಮಾಡುವ ಮೂಲಕ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು.ರಾಮಕೃಷ್ಣ ಆಶ್ರಮದ ಶ್ರೀ ಪರಹಿತಾನಂದ ಸ್ವಾಮೀಜಿ ಮತ್ತಿತರರು ಹಾಜರಿದ್ದರು. ಯೋಗಾಭ್ಯಾಸದ ಪ್ರಾತ್ಯಕ್ಷಿಕೆಗಳು ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿದ್ದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net