ಹೆಗ್ಗಳ ಸರ್ಕಾರಿ ಶಾಲೆಯಲ್ಲಿ ಯೋಗ ದಿನದ ಸಂಭ್ರಮ

ಹೆಗ್ಗಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯ ವಿಧ್ಯಾರ್ಥಿಗಳಿಗೆ ಜಯ ಪ್ರಕಾಶ್ ಯೋಗ ತರಬೇತಿ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಸುಜಾತಾ, ಎಸ್‌ಡಿಎಂಸಿ ಅಧ್ಯಕ್ಷೆ ರೋಹಿಣಿ, ಹಿರಿಯ ಶಿಕ್ಷಕಿ ಹೇಮಲತಾ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಶಿವಕುಮಾರ್, ಕೃಷಿ ಅಧಿಕಾರಿ ವಸಂತ್ ಮತ್ತಿತರರಿದ್ದರು.

Published on
ವಿರಾಜಪೇಟೆ: ಸಮೀಪದ ಹೆಗ್ಗಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸೋಮವಾರ ಗಿಡ ನೆಡುವ ಹಾಗೂ ಯೋಗ ದಿನ ಆಚರಣೆ ಆಯೋಜಿಸಲಾಗಿತ್ತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪದಾಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಟ್ಟರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅರಣ್ಯ ಇಲಾಖೆ ಅಧಿಕಾರಿಗಳಾದ ಲೋಕೇಶ್ ಹಾಗೂ ನಂದೀಶ್ ಅವರು ಶಾಲಾ ಮಕ್ಕಳಿಗೆ ಪರಿಸರ ಸಂರಕ್ಷಣೆ ಹಾಗೂ ಗಿಡ ನೆಡುವ ಮಹತ್ವವನ್ನು ವಿವರಿಸಿದರು.
ನಂತರ ಶೌರ್ಯ ವಿಪತ್ತು ತಂಡದ ಸಂಯೋಜಕ ಜಯಪ್ರಕಾಶ್ ಅವರು ಶಾಲಾ ಮಕ್ಕಳಿಗೆ ಯೋಗಭ್ಯಾಸ ಮಾಡಿಸಿದರು. ಶಾಲಾ ಮಕ್ಕಳು ಉತ್ಸಾಹದಿಂದ ಯೋಗಾಭ್ಯಾಸ ಮಾಡಿದರು.
ಮುಖ್ಯ ಶಿಕ್ಷಕಿ ಸುಜಾತಾ, ಎಸ್‌ಡಿಎಂಸಿ ಅಧ್ಯಕ್ಷೆ ರೋಹಿಣಿ, ಹಿರಿಯ ಶಿಕ್ಷಕಿ ಹೇಮಲತಾ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಶಿವಕುಮಾರ್, ಕೃಷಿ ಅಧಿಕಾರಿ ವಸಂತ್, ಎಸ್‌ಡಿಎಂಸಿ ಸದಸ್ಯರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪದಾಧಿಕಾರಿಗಳು, ಶಿಕ್ಷಕರು ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net