ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಅಭಿಜಿತ್(21)
ಅಭಿಜಿತ್(21)
Published on

ಪ್ರಮುಖ ಮುಖ್ಯಾಂಶಗಳು

  • ಕೂಡುಗದ್ದೆ ಗ್ರಾಮದಲ್ಲಿ ಮನೆಯಲ್ಲಿ ಕೃತ್ಯ
ಸಿದ್ದಾಪುರ: ಕೂಡುಗದ್ದೆ ಗ್ರಾಮದಲ್ಲಿ ಭಾನುವಾರ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೂಡುಗದ್ದೆ ನಿವಾಸಿ ಮಧುಸೂದನ್ ಅವರ ಪುತ್ರ ಅಭಿಜಿತ್(21) ಆತ್ಮಹತ್ಯೆ ಮಾಡಿಕೊಂಡ ಯುವಕ.
ಅಭಿಜಿತ್ ಪ್ರಥಮ ವರ್ಷದ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕುಟುಂಬದ ಸದಸ್ಯರು ಮನೆಗೆ ಬಂದಾಗ ಗೊತ್ತಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಗೊತ್ತಾಗಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದರು. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net