ಆಲೂರು ಸಿದ್ದಾಪುರದಲ್ಲಿ ಸ್ವಚ್ಛತಾ ಕಾರ್ಯ

ರೋಟರಿ ಮಲ್ಲೇಶ್ವರ ಕ್ಲಬ್, ಅರಣ್ಯ ಇಲಾಖೆ ಸಿಬ್ಬಂದಿ ಸಹಭಾಗಿತ್ವ
kdg photo
ಆಲೂರು ಸಿದ್ದಾಪುರ ರೋಟರಿ ಕ್ಲಬ್ ಮತ್ತು ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ನಡೆದ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ರೋಟರಿ ಪ್ರಮುಖರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ.ಮಹಾತ್ಮಾ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್‌ಬಹಾದೂರ್ ಶಾಸ್ತ್ರಿ ಅವರ ಜಯಂತಿಯನ್ನು
Published on: 

ಶನಿವಾರಸಂತೆ: ಮಹಾತ್ಮಾ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್‌ಬಹಾದೂರ್ ಶಾಸ್ತ್ರಿ ಅವರ ಜಯಂತಿಯನ್ನು ಸಮೀಪದ ಆಲೂರು ಸಿದ್ದಾಪುರ ರೋಟರಿ ಮಲ್ಲೇಶ್ವರ ಕ್ಲಬ್ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಸಹಭಾಗಿತ್ವದಲ್ಲಿ ರೋಟರಿ ಮಲ್ಲೇಶ್ವರ ಭವನದಲ್ಲಿ ಆಯೋಜಿಸಲಾಗಿತ್ತು.

ಈ ಸಂದರ್ಭ ದಿನದ ಮಹತ್ವ ಕುರಿತು ರೋಟರಿ ಕ್ಲಬ್ ಅಧ್ಯಕ್ಷ ಸಂಪತ್ ಮಾತನಾಡಿ, ಮಹಾತ್ಮ ಗಾಂಧಿ ಅವರು ಗ್ರಾಮಾಭಿವೃದ್ದಿ ಸ್ವಚ್ಛ ಭಾರತದ ಕನಸು ಕಂಡಿದ್ದರು. ಅದರಂತೆ ನಾವು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ರೋಟರಿ ಸಂಸ್ಥೆ ಸಮಾಜ ಸೇವೆಯ ಜತೆಯಲ್ಲ್ಲಿ ಸ್ವಚ್ಛತೆ ಅರಣ್ಯ, ಪರಿಸರ ಆರೋಗ್ಯ, ಶಿಕ್ಷಣದ ಬಗ್ಗೆ ಹೆಚ್ಚಿನ ಕಾಳಜಿಯನ್ನು ಹೊಂದಿದೆ. ಈ ನಿಟ್ಟಿನಲ್ಲಿ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಂಡಿರುವುದಾಗಿ ಹೇಳಿದರು. ಇದೇ ವೇಳೆ ಶನಿವಾರಸಂತೆ-ಕುಶಾಲನಗರ ಹೆದ್ದಾರಿಯ ಆಲದಮರ ಜಂಕ್ಷನ್‌ನಿಂದ ಭುವಂಗಾಲ ಗ್ರಾಮದ ಬಸ್ ನಿಲ್ದಾಣದವರೆಗೆ ರಸ್ತೆಯ ಎರಡು ಬದಿಯಲ್ಲಿ ಬಿದ್ದಿದ್ದ ಕಸ ತ್ಯಾಜ್ಯಗಳನ್ನು ಆಯ್ದು ಸ್ವಚ್ಛ ಮಾಡಲಾಯಿತು. ರೋಟರಿ ಕ್ಲಬ್ ಅಧ್ಯಕ್ಷ ಸಂಪತ್, ಕಾರ್ಯದರ್ಶಿ ಪಿ.ಕೆ.ಸತೀಶ್ ಕುಮಾರ್, ಉಪ ವಲಯ ಅರಣ್ಯಧಿಕಾರಿ ಶ್ರವಣ್, ರೋಟರಿ ಕ್ಲಬ್ ಸದಸ್ಯರಾದ ಎಚ್.ಇ.ತಮ್ಮಯ್ಯ, ವಿಜಯ್, ಕಿರಣ್, ಉದಯ್, ಆನಂದ್, ಲೋಕೇಶ್, ಪ್ರಸನ್ನ ಕುಮಾರ್, ದಯಾನಂದ್, ಪ್ರದೀಪ್ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net