ಕುಟುಂಬ ನಿರ್ವಹಣೆಯಲ್ಲಿ ಮಹಿಳೆ ಪಾತ್ರ ಅಪಾರ

ಕಾನ್‌ಬೈಲ್ ತಲಕಾವೇರಿ ಜ್ಞಾನವಿಕಾಸ ಕೇಂದ್ರದ 3ನೇ ವಾರ್ಷಿಕೋತ್ಸವ
ಕಾನ್‌ಬೈಲ್ ತಲಕಾವೇರಿ ಜ್ಞಾನವಿಕಾಸ ಕೇಂದ್ರ
ಕಾನ್‌ಬೈಲ್ ತಲಕಾವೇರಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಸಮಾರಂಭವನ್ನು ಗಣ್ಯರು ಉದ್ಘಾಟಿಸಿದರು. ಮೂರ್ತಿ, ಯಶೋದಾ, ಗೀತಾ, ಮಾಲಿನಿ ಇದ್ದರು.
Published on: 

ಸುಂಟಿಕೊಪ್ಪ: ಇಂದಿನ ಕಾಲಘಟ್ಟದಲ್ಲಿ ಕುಟುಂಬಗಳಲ್ಲಿ ಸಮಸ್ಯೆ ಎದುರಾದಾಗ ಮಹಿಳೆಯರು ಎದೆಗುಂದದೆ ಪ್ರಮುಖ ಪಾತ್ರವಹಿಸುವ ಮೂಲಕ ಕುಟುಂಬ ನಿರ್ವಹಣೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ ಎಂದು ಮಂಜಿಕೆರೆ ಪ್ರೌಢಶಾಲೆ ಮುಖ್ಯ ಶಿಕ್ಷಕ ಮೂರ್ತಿ ಹೇಳಿದರು.

ಮಂಜಿಕೆರೆ ಸಮುದಾಯ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಂಟಿಕೊಪ್ಪ ವಲಯ ಕಾರ್ಯಕ್ಷೇತ್ರದ ಕಾನ್‌ಬೈಲ್ ತಲಕಾವೇರಿ ಜ್ಞಾನವಿಕಾಸ ಕೇಂದ್ರದ 3ನೇ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿ, ಕುಟುಂಬ ನಿರ್ವಹಣೆಗೆ ಮಾತ್ರ ಸಿಮೀತವಾಗಿದ್ದ ಮಹಿಳೆಯರು ಬದಲಾದ ಕಾಲ ಘಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇಂದು ಕುಟುಂಬ ನಿರ್ವಹಣೆಯಲ್ಲಿ ಮುಖ್ಯ ಪಾತ್ರ ವಹಿಸುತ್ತಿದ್ದಾರೆ ಎಂದರು.

ಸುಂಟಿಕೊಪ್ಪ ವಲಯ ಮೇಲ್ವಿಚಾರಕ ಸಂತೋಷ್ ಮಾತನಾಡಿ, ಸ್ವ ಸಹಾಯ ಸಂಘದಿಂದ ಸಾಲ ಪಡೆದುಕೊಂಡು ಅದನ್ನು ಯಾವ ರೀತಿಯಲ್ಲಿ ವಿನಿಯೋಗಿಸಬೇಕು ಮತ್ತು ಸದೃಢವಾಗಿ ಬೆಳೆಯಬೇಕೆಂಬ ಸಂಕಲ್ಪದೊಂದಿಗೆ ಪ್ರತಿ ಕಾರ್ಯಕ್ಷೇತ್ರದಲ್ಲೂ ಜ್ಞಾನ ವಿಕಾಸ ಕೇಂದ್ರವನ್ನು ತೆರೆಯಲಾಗಿದೆ ಎಂದರು.

ಸೇವಾ ಪ್ರತಿನಿಧಿಗಳಾದ ಯಶೋದಾ, ಗೀತಾ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಾಲಿನಿ ಇದ್ದರು. ವಿವಿಧ ಆಟೋ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net