ಮುಳ್ಳೂರು ಗ್ರಾಮದಲ್ಲಿ ಗಣೇಶ ವಿಸರ್ಜನೆ

ಶೋಭಾ ಯಾತ್ರೆಯಲ್ಲಿ ನೂರಾರು ಭಕ್ತರು ಭಾಗಿ
immerced yttra
ಮುಳ್ಳೂರುನಲ್ಲಿ ಹಮ್ಮಿಕೊಂಡಿದ್ದ ಗೌರಿ, ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ನೂರಾರು ಭಕ್ತರು ಭಾಗವಹಿಸಿದ್ದರು. ganesha
Published on: 

ಶನಿವಾರಸಂತೆ: ಗೌರಿ ಗಣೇಶ ಹಬ್ಬದ ಪ್ರಯುಕ್ತ ಸಮಿಪದ ಮುಳ್ಳೂರು ಗ್ರಾಮದ ವಿನಾಯಕ ಗೆಳೆಯರ ಬಳಗ ವತಿಯಿಂದ ಗ್ರಾಮದಲ್ಲಿ ಪ್ರತಿಷ್ಠಾಪಿಸಿದ್ದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೆ ಕಾರ್ಯಕ್ರಮ ಮಂಗಳವಾರ ಅದ್ದೂರಿಯಾಗಿ ನೆರವೇರಿತು.

ಗ್ರಾಮದ ವೇದಿಕೆಯಲ್ಲಿ ಪ್ರತಿಷ್ಠಾಪಿಸಿದ ಗೌರಿ ಗಣೇಶ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ವಾಹದಲ್ಲಿ ಹೂವಿನಿಂದ ಅಲಂಕರಿಸಿದ ಮಂಟಪದಲ್ಲಿ ಗೌರಿ ಗಣೇಶ ಮೂರ್ತಿಯನ್ನು ಕೂರಿಸಲಾಯಿತು. ನಂತರ ಶೋಭಾ ಯಾತ್ರೆಯು ಗ್ರಾಮದ ಮುಖ್ಯ ಬೀದಿಗಳಲ್ಲಿ ಸಂಚರಿಸಿ

ಮುಳ್ಳೂರು ಜಂಕ್ಸನ್‌ನಲ್ಲಿರುವ ಅರಳಿಮರ ಕಟ್ಟೆ ವರೆಗೂ ಸಾಗಿತು. ಮೆರವಣಿಗೆಗೆ ವಾದ್ಯಗೋಷ್ಠಿ ಮೆರುಗು ನೀಡಿತು.

ಗ್ರಾಮದ ಪುರುಷರು, ಮಹಿಳೆಯರು, ಮಕ್ಕಳು ಪಾಲ್ಗೊಂಡಿದ್ದರು. ಗುದ್ದಲಿಗೆರೆಯಲ್ಲಿ ಗೌರಿ ಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಯಿತು. ಸಾರ್ವಜನಿಕರಿಗೆ ಮಧ್ಯಾಹ್ನ ಸಮಿತಿ ವತಿಯಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net