

ಮಡಿಕೇರಿ
ಸಮೀಪದ ಮೂರ್ನಾಡುವಿನಲ್ಲಿ ವಿವಿಧ ಸಂಘಗಳ ವತಿಯಿಂದ ಗೌರಿ-ಗಣೇಶೋತ್ಸವದ ದಿನ ಗಣೇಶ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಶ್ರದ್ಧಾಭಕ್ತಿಯಿಂದ 7 ದಿನಗಳವರೆಗೆ ಪೂಜಾ ಕೈಂಕರ್ಯಗಳನ್ನು ನಡೆಸಿ ಭಾನುವಾರ ರಾತ್ರಿ ಬಲಮುರಿಯ ಕಾವೇರಿ ನದಿಯಲ್ಲಿ ವಿಸರ್ಜಿಸಲಾಯಿತು.
ಮೂರ್ನಾಡು ವೆಂಕಟೇಶ್ವರ ಕಾಲೋನಿಯ ವಿನಾಯಕ ಯುವಕ ಮಂಡಳಿಯ ವತಿಯಿಂದ 35ನೇ ವರ್ಷದಗೌರಿ-ಗಣೇಶೋತ್ಸವದ ಗಣೇಶ ಉತ್ಸವ ಮೂರ್ತಿ, ಮೂರ್ನಾಡು ಗಾಂಧಿನಗರದ ಶ್ರೀರಾಮ ಮಂದಿರ ಸೇವಾ ಸಮಿತಿಯ ವತಿಯಿಂದ 34ನೇ ವರ್ಷದಗೌರಿ-ಗಣೇಶೋತ್ಸವದ ಉತ್ಸವ ಗಣೇಶ ಮೂರ್ತಿ, ವಿಘ್ನೇಶ್ವರ ಸೇವಾ ಸಮಿತಿಯ ವತಿಯಿಂದ ಮೂರ್ನಾಡು ಪಟ್ಟಣದ ಟಿ ಜಂಕ್ಷನ್‌ನಲ್ಲಿ 32ನೇ ವರ್ಷದಗೌರಿ-ಗಣೇಶೋತ್ಸವದ ಗಣೇಶ ಮೂರ್ತಿ, ಗಜೇಂದ್ರ ಯುವ ಶಕ್ತಿ ಸಂಘದ ವತಿಯಿಂದ 7ನೇ ವರ್ಷದ ಗೌರಿ-ಗಣೇಶೋತ್ಸವದ ಗಣೇಶ ಮೂರ್ತಿ, ಅಯ್ಯಪ್ಪ ಗೆಳೆಯರ ಬಳಗ, ಎಂ-ಟೌನ್ ಇವರ ವತಿಯಿಂದ 3ನೇ ವರ್ಷದ ಗೌರಿ-ಗಣೇಶೋತ್ಸವದ ವಿನಾಯಕ ಮೂರ್ತಿ, ಕೋಡಂಬೂರಿನ ವಿಘ್ನೇಶ್ವರ ಗೆಳೆಯರ ಬಳಗದಿಂದ 18ನೇ ವರ್ಷದ ಗೌರಿ-ಗಣೇಶೋತ್ಸವ ಅಂಗವಾಗಿ ಗಣೇಶ ಮೂರ್ತಿಗಳನ್ನು ಅಲಂಕೃತ ಮಂಟಪದಲ್ಲಿರಿಸಿ ಮೂರ್ನಾಡಿನ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು.
ಗಣೇಶ ಉತ್ಸವ ಮೂರ್ತಿಗಳನ್ನು ಹೊತ್ತ ಆರು ವಿದ್ಯತ್ ಅಲಂಕೃತ ಮಂಟಪಗಳ ಮುಂದೆಯೂ ಡಿಜೆ ಸೌಂಡ್ಸ್ಗಳ ಅಬ್ಬರವಿತ್ತು. ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್À ನೇತೃತ್ವದಲ್ಲಿ ಸೂಕ್ತ ಬಂದೋಬಸ್ತ್ ಮಾಡಲಾಗಿತ್ತು. ಮೂರ್ನಾಡು ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ್ದ ಭಕ್ತಾಧಿಗಳು, ಸಾರ್ವಜನಿಕರು, ಮಹಿಳೆಯರು, ಮಕ್ಕಳು ಡಿಜೆ ಸೌಂಡ್ಸ್ Àಅಬ್ಬರಕ್ಕೆ ಹೆಜ್ಜೆ ಹಾಕುತ್ತ, ಮೂರ್ನಾಡಿನ ಮುಖ್ಯ ರಸ್ತೆಗಳಲ್ಲಿ ಶೋಭಯಾತ್ರೆಯಲ್ಲಿ ಪಾಲ್ಗೊಂಡರು. ನಂತರ ಬಲಮುರಿಯ ಕಾವೇರಿ ನದಿಯಲ್ಲಿ ಎಲ್ಲಾ ಉತ್ಸವ ಮೂರ್ತಿಗಳನ್ನು ವಿಸರ್ಜಿಸಲಾಯಿತು.