ಯಡವನಾಡು, ಅತ್ತೂರು ಮತ್ತೆ ಕಂದಾಯ ಗ್ರಾಮ ಮಾಡಲು ಮನವಿ

ಯಡವನಾಡು, ಅತ್ತೂರು ಮತ್ತೆ ಕಂದಾಯ ಗ್ರಾಮ ಮಾಡಲು ಮನವಿ
ಸೋಮವಾರಪೇಟೆ ತಾಲೂಕಿನ ಯಡವನಾಡು ಹಾಗೂ ಅತ್ತೂರು ಗ್ರಾಮಗಳನ್ನು ರದ್ದುಗೊಳಿಸಿರುವ ಕ್ರಮವನ್ನು ಮರು ಪರಿಶೀಲಿಸುವಂತೆ ಶಾಸಕ ಡಾ. ಮಂತರ್ ಗೌಡ ನೇತೃತ್ವದ ನಿಯೋಗ ಉಪಮುಖ್ಯಮಂತ್ರಿಗಳು ಡಾ. ಜಿ. ಪರಮೇಶ್ವರ್ ಅವರಲ್ಲಿ ಮನವಿ ಮಾಡಿತು. ಟಿ.ಕೆ. ರಮೇಶ್, ಮೋಹನ್, ಗಣೇಶ್, ಡಿ.ಎಂ. ರಮೇಶ್, ಸುರೇಶ್, ಪ್ರದೀಪ್, ಲೋಕೇಶ್ ಮತ್ತಿತರರು ಇದ್ದರು.
Published on: 

ಮಡಿಕೇರಿ

ಸೋಮವಾರಪೇಟೆ ತಾಲೂಕಿನ ಯಡವನಾಡು ಹಾಗೂ ಅತ್ತೂರು ಗ್ರಾಮಗಳನ್ನು ರದ್ದುಗೊಳಿಸಿರುವ ಕ್ರಮವನ್ನು ಮರು ಪರಿಶೀಲಿಸಿ, ಅವುಗಳನ್ನು ಪುನಃ ಕಂದಾಯ ಗ್ರಾಮಗಳನ್ನಾಗಿ ಮರು ಸ್ಥಾಪಿಸಬೇಕೆಂದು ಆಗ್ರಹಿಸಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇತೃತ್ವದಲ್ಲಿ ಸ್ಥಳೀಯ ರೈತರ ನಿಯೋಗ ಗುರುವಾರ ಬೆಂಗಳೂರಿನಲ್ಲಿ ಸರ್ಕಾರದ ಪ್ರಮುಖ ಸಚಿವರಿಗೆ ಮನವಿ ಸಲ್ಲಿಸಿತು.

ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ್ ಮತ್ತು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೃಷಿ ಸಚಿವ ಪಿ.ಎಂ. ನರೇಂದ್ರ ಸ್ವಾಮಿ ಅವರನ್ನು ಭೇಟಿ ಮಾಡಿದ ನಿಯೋಗ, ಗ್ರಾಮಗಳ ರದ್ದತಿಯಿಂದ ರೈತರು ಎದುರಿಸುತ್ತಿರುವ ತೊಂದರೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿ ಮನವರಿಕೆ ಮಾಡಿಕೊಟ್ಟಿತು.

ಈ ಹಿಂದೆ ಕಂದಾಯ ಗ್ರಾಮಗಳಾಗಿದ್ದ ಯಡವನಾಡು ಮತ್ತು ಅತ್ತೂರು ಗ್ರಾಮಗಳನ್ನು ನಂತರದ ದಿನಗಳಲ್ಲಿ ರದ್ದುಗೊಳಿಸಲಾಗಿತ್ತು. ಇದರಿಂದಾಗಿ ಈ ಭಾಗದ ರೈತರು ಹಾಗೂ ಗ್ರಾಮಸ್ಥರು ಸರ್ಕಾರಿ ಸೌಲಭ್ಯಗಳು, ಜಮೀನಿನ ಹಕ್ಕುಪತ್ರ, ಕಂದಾಯ ದಾಖಲೆಗಳು ಸೇರಿದಂತೆ ಹಲವು ಮೂಲಭೂತ ಕಾರ್ಯಗಳಿಗೆ ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಂಡು, ಈ ಎರಡೂ ಗ್ರಾಮಗಳನ್ನು ತಕ್ಷಣವೇ ಪುನರ್ ಸ್ಥಾಪಿಸಬೇಕು ಎಂದು ಶಾಸಕರು ಹಾಗೂ ರೈತ ಮುಖಂಡರು ಸಚಿವರಲ್ಲಿ ವಿನಂತಿಸಿದರು.

ಮನವಿ ಸ್ವೀಕರಿಸಿದ ಸಚಿವರು, ಈ ವಿಷಯದ ಕುರಿತು ಸಂಬAಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಹಾಗೂ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಯಡವನಾಡು ಗ್ರಾಮದ ಪ್ರಮುಖರಾದ ಟಿ.ಕೆ. ರಮೇಶ್, ಮೋಹನ್, ಗಣೇಶ್, ಡಿ.ಎಂ. ರಮೇಶ್, ಸುರೇಶ್ ಹಾಗೂ ವಕೀಲರಾದ ಪ್ರದೀಪ್, ಲೋಕೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net