ವ್ಯವಸ್ಥಿತವಾಗಿ ಪಕ್ಷ ಸಂಘಟನೆಗೆ ಕರೆ

ವ್ಯವಸ್ಥಿತವಾಗಿ ಪಕ್ಷ ಸಂಘಟನೆಗೆ ಕರೆ
ಮೂರ್ನಾಡು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಎರಡನೇ ಬಾರಿಗೆ ಮುಂದುವರಿದಿರುವ ಧರ್ಮಜ ಉತ್ತಪ್ಪನ ಅವರನ್ನು ಸನ್ಮಾನಿಸಲಾಯಿತು. ಹೆಚ್.ಎ.ಹಂಸ, ತೆನ್ನಿರ ಮೈನಾ, ಜಮ್ಮಡ ಸೋಮಣ್ಣ ಮತ್ತಿತರರು ಇದ್ದರು.
Published on: 

ಮಡಿಕೇರಿ

ಕಾಂಗ್ರೆಸ್ ಪಕ್ಷವನ್ನು ಜಿಲ್ಲೆಯಲ್ಲಿ ಅತ್ಯಂತ ವ್ಯವಸ್ಥಿತವಾಗಿ ಮತ್ತು ಪರಿಣಾಮಕಾರಿಯಾಗಿ ಸಂಘಟನೆ ಮಾಡುವಂತೆ ಕಾರ್ಯಕರ್ತರಿಗೆ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ ಆದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜಾ ಉತ್ತಪ್ಪ ಕರೆ ನೀಡಿದರು. ಶುಕ್ರವಾರ ನಡೆದ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಮೂರ್ನಾಡು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಅತೀ ಹೆಚ್ಚು ಅಭಿವೃದ್ಧಿ ಕಾರ್ಯಗಳು ಕಾಂಗ್ರೆಸ್ ಪಕ್ಷದ ಶಾಸಕರು ಅಧಿಕಾರಕ್ಕೆ ಬಂದ ನಂತರ ನಡೆಯುತ್ತಿದ್ದು ಮುಂದಿನ ಬಾರಿಗೂ ಜಿಲ್ಲೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂಬ ಒಲವು ಸಾರ್ವಜನಿಕವಾಗಿ ವ್ಯಕ್ತವಾಗುತ್ತಿದೆ. ಈ ನಿಟ್ಟಿನಲ್ಲಿ ಪಕ್ಷದ ಸಂಘಟನೆ ಅತ್ಯಗತ್ಯವಾಗಿದೆ ಎಂದು ಹೇಳಿದರು.

ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ ಮಾತನಾಡಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಮೂರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಕೋಟ್ಯಂತರ ರೂ.ಗಳ ಅನುದಾನವನ್ನು ಒದಗಿಸಿದ್ದಾರೆ. ಅಕ್ಟೋಬರ್ ತಿಂಗಳಿನಲ್ಲಿ

ಮೂರ್ನಾಡು ಪಟ್ಟಣದಲ್ಲಿ ಜಿಲ್ಲಾಮಟ್ಟದ ಕಾಂಗ್ರೆಸ್ ಸಮಾವೇಶ ನಡೆಸಲಾಗುವುದು. ಗ್ರಾಮ ಪಂಚಾಯತ್ ಮಟ್ಟದ ಗ್ಯಾರಂಟಿ ಸಮಿತಿ ರಚನೆ ಆಗಬೇಕು ಎಂದರು.

ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಮಾತನಾಡಿ, ಎಸ್.ಐ.ಆರ್. ಪ್ರಗತಿ ಬಗ್ಗೆ ಮಾಹಿತಿ ನೀಡಿದರು. ಜಿಲ್ಲೆಯ ಪ್ರತಿಯೊಬ್ಬ ಮತದಾರರು ಕೂಡ ಮತದಾನದ ಹಕ್ಕನ್ನು ಕಳೆದುಕೊಳ್ಳದ ಹಾಗೆ ಜಾಗೃತಿ ವಹಿಸಲಾಗಿದೆ ಎಂದು ತಿಳಿಸಿದರು. ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕವನ್ ಕೊತ್ತೋಳಿ ಭಾರತ್ ಜೋಡೋ ಯುವಕ ಸಂಘದ ಬಗ್ಗೆ ಮಾಹಿತಿ ನೀಡಿದರು.

ಇದೇ ಸಂಧರ್ಭದಲ್ಲಿ ಎ.ಐ.ಸಿ.ಸಿ. ಸೃಜನ್ ಅಭಿಯಾನದ ನಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಎರಡನೇ ಬಾರಿಗೆ ಮುಂದುವರಿದಿರುವ ಧರ್ಮಜ ಉತ್ತಪ್ಪನ ಅವರನ್ನು ವಲಯ ಕಾಂಗ್ರೆಸ್ ವತಿಯಿಂದ ಸನ್ಮಾನಿಸಲಾಯಿತು.

ವಲಯ ಕಾಂಗ್ರೆಸ್ ಅಧ್ಯಕ್ಷ ಕೇಶವ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಡಿ.ಸಿ.ಸಿ. ಸದಸ್ಯರಾದ ಮುಂಡAಡ ಭಾಗೇಶ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವೂಫ್ ಶೇಖ್, ವಲಯ ಕಾಂಗ್ರೆಸ್ ಉಪಾಧ್ಯಕ್ಷ ಮಹಮದ್ ಆಲಿ, ಯುವ ಕಾಂಗ್ರೆಸ್ ಜಿಲ್ಲಾ ಪದಾಧಿಕಾರಿಗಳಾದ ಇಟ್ಟೀರ ಭವಿನ್, ಪ್ರಮುಖರಾದ ರಘು ಭೈರ, ಧನಂಜಯ್, ಎ.ಆರ್. ಶಿವಕುಮಾರ್, ಭಾಗ್ಯ, ರಾಧ, ಶಿವು ಬಾಡಗ, ಎಂ.ಎA. ಸಾದಿಕ್

,ಸೋಹೇಲ್, ವಸಂತ ಪಾರೆ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net