

ವಿರಾಜಪೇಟೆ
ವಿದ್ಯಾರ್ಥಿಗಳ ಶೈಕ್ಷಣಿಕ ವಿಕಸನದಲ್ಲಿ ಕೇವಲ ಶಿಕ್ಷಕರಷ್ಟೇ ಅಲ್ಲದೆ, ಪೋಷಕರ ಜವಾಬ್ದಾರಿಯೂ ಅತ್ಯಂತ ಮಹತ್ತರವಾದದ್ದು ಎಂದು ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಎಂ.ಕೆ. ಪದ್ಮ ಹೇಳಿದರು. ಕಾಲೇಜಿನಲ್ಲಿ ಶುಕ್ರವಾರ ನಡೆದ ಪೋಷಕರ ಹಾಗೂ ಶಿಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪೋಷಕರು ವಿದ್ಯಾರ್ಥಿಗಳಿಗೆ ಹೆಚ್ಚಿನ ಸಮಯವನ್ನು ಮೀಸಲಿರಿಸಿ, ಅವರ ವಿದ್ಯಾಭ್ಯಾಸದ ಕಡೆಗೆ ವಿಶೇಷ ಗಮನ ಹರಿಸಬೇಕು ಎಂದು ಇದೇ ಸಂದರ್ಭ ಹೇಳಿದರು.
ಕನ್ನಡ ಉಪನ್ಯಾಸಕಿ ಎಂ.ಪಿ. ದಮಯಂತಿ ಮಾತನಾಡಿ, ಕಾಲೇಜಿನ ಪ್ರಸಕ್ತ ಶೈಕ್ಷಣಿಕ ವರ್ಷದ ಚಟುವಟಿಕೆಗಳು ಹಾಗೂ ಪರೀಕ್ಷೆಗಳಿಗೆ ಸಂಬAಧಿಸಿದ ಸಂಪೂರ್ಣ ಮಾಹಿತಿಗಳನ್ನು ಪೋಷಕರಿಗೆ ಸವಿವರವಾಗಿ ತಿಳಿಸಿಕೊಟ್ಟರು.
ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದ ಪೋಷಕರು ಸಕ್ರಿಯವಾಗಿ ಪಾಲ್ಗೊಂಡು ಮುಕ್ತ ಸಂವಾದ ನಡೆಸಿದರು. ಕಾಲೇಜಿನ ಸರ್ವಾಂಗೀಣ ಏಳಿಗೆಗಾಗಿ ತಮ್ಮ ಅಮೂಲ್ಯವಾದ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.
ಪೋಷಕ-ಶಿಕ್ಷಕ ಸಂಘದ ಉಪಾಧ್ಯಕ್ಷೆ ಸುಗಂಧಿ ಮಾತನಾಡಿ, ನಮ್ಮ ಮಕ್ಕಳ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಪೋಷಕರಾದ ನಮ್ಮೆಲ್ಲರ ಪ್ರಮುಖ ಕರ್ತವ್ಯ ಎಂದರು.
ಪೋಷಕ-ಶಿಕ್ಷಕ ಸಂಘದ ಸಂಚಾಲಕಿ ಡೈನ ಸೋಮಯ್ಯ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ನಕೀಯ ಬಾನು, ಉಪನ್ಯಾಸಕರಾದ ಅನುಪಮ ತಿಮ್ಮಯ್ಯ, ಪ್ರೇಮಾಂಜಲಿ ಸೇರಿದಂತೆ ಉಪನ್ಯಾಸಕ ವೃಂದ ಹಾಗೂ ಪೋಷಕರು ಹೆಚ್ಚಿನ ಇದ್ದರು.