ಸಂಘಟನಾ ಸೃಜನ್ ಅಭಿಯಾನ - 2 ಯಶಸ್ವಿ

ಸಂಘಟನಾ ಸೃಜನ್ ಅಭಿಯಾನ - 2 ಯಶಸ್ವಿ
ಕಾಂಗ್ರೆಸ್ ಪಕ್ಷದಲ್ಲಿ ನೂತನವಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಲುವಾಗಿ ಹಮ್ಮಿಕೊಳ್ಳಲಾಗಿದ್ದ ಸಂಘಟನಾ ಸೃಜನ್ ಅಭಿಯಾನ - 2 ಪ್ರಕ್ರಿಯೆಯಲ್ಲಿ ಪಕ್ಷದ ಮುಂಡರು ಪಾಲ್ಗೊಂಡಿದ್ದರು. ಧರ್ಮಜ ಉತ್ತಪ್ಪ, ಆರ್. ವಿ. ವೆಂಕಟೇಶ್, ಪದ್ಮನಾಭ, ಪುಷ್ಪಲತಾ, ನಂದಕುಮಾರ್, ಟಿ.ಪಿ. ರಮೇಶ್ ಮತ್ತಿತರರು ಇದ್ದರು.
Published on: 

ಮಡಿಕೇರಿ

ಕಾಂಗ್ರೆಸ್ ಪಕ್ಷದಲ್ಲಿ ನೂತನವಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಲುವಾಗಿ ಹಮ್ಮಿಕೊಳ್ಳಲಾಗಿದ್ದ ಸಂಘಟನಾ ಸೃಜನ್ ಅಭಿಯಾನ - 2 ಪ್ರಕ್ರಿಯೆ ಕೊಡಗು ಜಿಲ್ಲೆಯಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿದೆ ಎಂದು ಜಿಲ್ಲಾ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ. ಈ ಹಿಂದೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ನಡೆದ ಮಾದರಿಯಲ್ಲೇ ಪ್ರಜಾಸತ್ತಾತ್ಮಕವಾಗಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಹಾಗೂ ಮುಖಂಡರ ಅಭಿಪ್ರಾಯಗಳನ್ನು ಕ್ರೋಡೀಕರಿಸಿ ನೂತನ ಬ್ಲಾಕ್ ಅಧ್ಯಕ್ಷರನ್ನು ನಿಯೋಜಿಸುವ ಪ್ರಕ್ರಿಯೆ ನಡೆಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ನೇಮಕಗೊಂಡಿದ್ದ ವೀಕ್ಷಕರು ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದ ಬ್ಲಾಕ್ ವ್ಯಾಪ್ತಿಗೆ ಭೇಟಿ ನೀಡಿ, ಕಾರ್ಯಕರ್ತರು ಹಾಗೂ ಪ್ರಮುಖ ನಾಯಕರನ್ನು ಖುದ್ದಾಗಿ ಭೇಟಿಯಾಗಿ ಸಲಹೆ-ಅಭಿಪ್ರಾಯಗಳನ್ನು ಸಂಗ್ರಹಿಸಿದ್ದಾರೆ. ಜಿಲ್ಲೆಯ ಸಚಿವರು ಹಾಗೂ ಶಾಸಕರ ಮಾರ್ಗದರ್ಶನದಲ್ಲಿ ಈ ಸಂಪೂರ್ಣ ಪ್ರಕ್ರಿಯೆ ಪಾರದರ್ಶಕವಾಗಿ ನಡೆದಿದ್ದು, ಶೀಘ್ರದಲ್ಲೇ ಅರ್ಹ ಮತ್ತು ಸಮರ್ಥ ನಾಯಕರಿಗೆ ಅಧ್ಯಕ್ಷ ಸ್ಥಾನ ಸಿಗಲಿದೆ.

ಈ ಅಭಿಯಾನಕ್ಕಾಗಿ ಕೆಪಿಸಿಸಿ ವೀಕ್ಷಕರಾಗಿ ಆಗಮಿಸಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಆರ್. ವಿ. ವೆಂಕಟೇಶ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪದ್ಮನಾಭ ಮತ್ತು ಮಮತಾ ಗಟ್ಟಿ ವಿವಿಧ ಬ್ಲಾಕ್‌ಗಳಲ್ಲಿ ಪ್ರಮುಖ ಸಭೆಗಳನ್ನು ನಡೆಸಿ ಅಭಿಪ್ರಾಯ ಸಂಗ್ರಹಿಸಿದರು. ಈ ಸಭೆಗಳಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರುಗಳು ಹಾಗೂ ಪ್ರಮುಖ ಮುಖಂಡರು ಭಾಗವಹಿಸಿದ್ದರು.

ವಯೋಮಿತಿ ಮತ್ತು ಅನುಭವವನ್ನು ಪ್ರಮುಖ ಮಾನದಂಡವಾಗಿಟ್ಟುಕೊAಡು, ಸಾಮಾಜಿಕ ನ್ಯಾಯದೊಂದಿಗೆ ಮಹಿಳೆಯರಿಗೂ ಅರ್ಹ ಪ್ರಾತಿನಿಧ್ಯ ನೀಡುವುದು ಎಐಸಿಸಿ ಮತ್ತು ಕೆಪಿಸಿಸಿ ಆಶಯವಾಗಿದೆ. ಪಕ್ಷದಲ್ಲಿ ಎರಡನೇ ಹಂತದ ನಾಯಕರನ್ನು ಬೆಳೆಸುವ ನಿಟ್ಟಿನಲ್ಲಿ ಈ ಅಭಿಯಾನ ಸಹಕಾರಿಯಾಗಲಿದೆ.

ಇದು ಚುನಾವಣಾ ವರ್ಷವಾಗಿದ್ದು, ಶೀಘ್ರದಲ್ಲೇ ಬರಲಿರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ತದನಂತರ ನಡೆಯುವ ನಗರ-ಪಟ್ಟಣ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಪಕ್ಷವನ್ನು ತಳಮಟ್ಟದಿಂದ ಗಟ್ಟಿಗೊಳಿಸಲು ಈ ಪ್ರಕ್ರಿಯೆ ನಡೆಸಲಾಗಿದೆ. ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಗೆಲುವೇ ನಮ್ಮ ಮುಖ್ಯ ಗುರಿ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net