ಸಮುದಾಯಗಳ ಶ್ರೇಯೋಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರದ ಭರವಸೆ

ಸಮುದಾಯಗಳ ಶ್ರೇಯೋಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರದ ಭರವಸೆ
ಕುಶಾಲನಗರ ತಾಲೂಕು ಶ್ರೀ ವಿಶ್ವಕರ್ಮ ಸಮಾಜ ವತಿಯಿಂದ ಏರ್ಪಡಿಸಿದ್ದ 23ನೇ ವರ್ಷದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ, ದುರ್ಗಾ ನಮಸ್ಕಾರ ಪೂಜೆ ಕಾರ್ಯಕ್ರಮದಲ್ಲಿ ಜನಾಂಗದ ಪ್ರಮುಖರು ಪಾಲ್ಗೊಂಡಿದ್ದರು. ಪಿ. ಸುಜ್ಞಾನಮೂರ್ತಿ, ಕೆ.ಎಸ್. ಚಂದ್ರಶೇಖರ್, ಹೆಚ್.ಬಿ. ಲಿಂಗಮೂರ್ತಿ, ವಿ. ಕುಮಾರ್, ಲಲಿತಾ ವರದರಾಜ್, ಡಿ. ಪುನೀತ್ ಮತ್ತಿತರರು ಇದ್ದರು.
Published on: 

ಕುಶಾಲನಗರ

ಸಮುದಾಯಗಳ ಶ್ರೇಯೋಭಿವೃದ್ಧಿಗೆ ಸರ್ಕಾರದ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಹೇಳಿದರು. ಇಲ್ಲಿನ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಕುಶಾಲನಗರ ತಾಲೂಕು ಶ್ರೀ ವಿಶ್ವಕರ್ಮ ಸಮಾಜ ವತಿಯಿಂದ ಮಂಗಳವಾರ ಸಂಜೆ ಏರ್ಪಡಿಸಿದ್ದ 23ನೇ ವರ್ಷದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ, ದುರ್ಗಾ ನಮಸ್ಕಾರ ಪೂಜೆ, ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕ ಮಹಾಸಭೆಯ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.

ಹೆಬ್ಬಾಲೆಯಲ್ಲಿರುವ ಶ್ರೀ ಕಾಳಿಕಾಂಬ ವಿಶ್ವಕರ್ಮ ಕರಕುಶಲ ಕೈಗಾರಿಕಾ ಸಹಕಾರ ಸಂಘಕ್ಕೆ ಪ್ರಸ್ತುತ ಆರ್ಥಿಕ ವರ್ಷದಲ್ಲಿ ಸಮುದಾಯ ಭವನ ನಿರ್ಮಾಣಕ್ಕಾಗಿ ಧನಸಹಾಯ ಒದಗಿಸಲಾಗುವುದು. ಕುಶಾಲನಗರ ತಾಲೂಕು ವಿಶ್ವಕರ್ಮ ಸಮಾಜದ ನಿವೇಶನದ ಖಾತೆ ಮಾಡಿಕೊಡಲು ಸಹಕರಿಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ. ಸುಜ್ಞಾನಮೂರ್ತಿ,ಸಮುದಾಯದ ಶ್ರೇಯೋಭಿವೃದ್ಧಿಗಾಗಿ ನಿಗಮದಿಂದ ದೊರೆಯುವ ವಿವಿಧ ಯೋಜನಾ ಸೌಲಭ್ಯಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು. ಮಹಿಳೆಯರಿಗಾಗಿ ಹೆಚ್ಚಿನ ಬೇಡಿಕೆ ಇರುವ ನೂತನ ಹೊಲಿಗೆ ಯಂತ್ರ ಯೋಜನೆಯನ್ನು 2026 ರಲ್ಲಿ ಜಾರಿಗೆ ತರಲಾಗುವುದು ಎಂದರು.

ಕುಶಾಲನಗರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಸಮಾಜದ ಬೆಳವಣಿಗೆಗೆ ಆಡಳಿತ ಮಂಡಳಿಯ ಪಾತ್ರವನ್ನು ಶ್ಲಾಘಿಸಿ, ನಿರಂತರ ಬೆಂಬಲದ ಭರವಸೆ ನೀಡಿದರು.

ಧಾರ್ಮಿಕ ಸಭೆಯ ದಿವ್ಯ ಸಾನಿಧ್ಯವನ್ನು ಅರೇಮಾದನಹಳ್ಳಿಯ ಶ್ರೀ ವಿಶ್ವಕರ್ಮ ಜಗದ್ಗುರು ಪೀಠದ ಶ್ರೀ ಜ್ಞಾನಘನ ವಿದ್ಯಾತೀರ್ಥ ಮಹಾಸ್ವಾಮಿಗಳು ವಹಿಸಿ ಆಶೀರ್ವಚನ ನೀಡಿದರು. ತಾಲೂಕು ವಿಶ್ವಕರ್ಮ ಸಮಾಜದ ಅಧ್ಯಕ್ಷ ಸಿ. ದುರ್ಗೇಶ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಸಿ. ಪ್ರಶಾಂತ್ ಮತ್ತು ಬೆಂಗಳೂರಿನ ದೈಹಿಕ ಶಿಕ್ಷಣ ಶಿಕ್ಷಕ ಕೆ.ಎಸ್. ಶಾಸ್ತ್ರಿ ಪ್ರಧಾನ ಭಾಷಣಕಾರರಾಗಿ ಆಗಮಿಸಿ ವಿಶ್ವಕರ್ಮ ಪೂಜಾ ಮಹೋತ್ಸವ ಹಾಗೂ ಜಯಂತಿಯ ಕುರಿತು ವಿಶೇಷ ಉಪನ್ಯಾಸ ನೀಡಿದರು.

ರಾಜ್ಯ ವಿಶ್ವಕರ್ಮ ಸಮಾಜದ ಕಾನೂನು ಸಲಹೆಗಾರ ಕೆ.ಎಸ್. ಚಂದ್ರಶೇಖರ್, ಮಾಜಿ ಅಧ್ಯಕ್ಷ ಹೆಚ್.ಬಿ. ಲಿಂಗಮೂರ್ತಿ, ಗೌರವಾಧ್ಯಕ್ಷ ವಿ. ಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಲಲಿತಾ ವರದರಾಜ್, ಯುವ ಘಟಕದ ಅಧ್ಯಕ್ಷ ಡಿ. ಪುನೀತ್, ಪಿರಿಯಾಪಟ್ಟಣ ತಾಲೂಕು ಅಧ್ಯಕ್ಷ ನೀಲಕಂಠ, ಗೌರವಾಧ್ಯಕ್ಷ ಅಣ್ಣಯ್ಯ ಆಚಾರ್, ವಿವಿಧ ಘಟಕಗಳ ಪ್ರಮುಖರಾದ ಜಗದೀಶ್ ಮಡಿಕೇರಿ, ಬಿ.ಬಿ. ನಾಗರಾಜು, ಹೆಚ್.ಎನ್. ಸದಾನಂದ, ಟಿ.ಎಸ್. ಪ್ರಕಾಶಾಚಾರಿ, ಹೆಚ್.ಎನ್. ನಾಗಾಚಾರಿ, ಹೆಚ್.ಬಿ. ರಾಜಮೂರ್ತಿ, ಹೆಚ್.ಎನ್. ಸುಬ್ರಹ್ಮಣ್ಯ, ಹೆಚ್.ಎನ್. ದಿನೇಶ್ ಕುಮಾರ್ ಮತ್ತಿತರರು ಇದ್ದರು.

2025-26ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ತಾಲೂಕು ವಿಶ್ವಕರ್ಮ ಸಮಾಜದ ಯುವ ಘಟಕ ಮತ್ತು ಶ್ರೀ ಹೆಚ್.ಎನ್. ಸುಬ್ರಹ್ಮಣ್ಯ ಹಾಗೂ ಕಾಂತಾಮಣಿ ದಂಪತಿಗಳ ದತ್ತಿನಿಧಿಯಡಿ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು.

ಪುರೋಹಿತರಾದ ರಾಜೇಶ್ ಆಚಾರ್ಯ ಮತ್ತು ರಾಮಸ್ವಾಮಿ ಆಚಾರ್ಯರ ನೇತೃತ್ವದಲ್ಲಿ ವಿಶೇಷ ಧಾರ್ಮಿಕ ವಿಧಿ-ವಿಧಾನಗಳು ನಡೆದವು. ಮಹಿಳಾ ಘಟಕದ ವತಿಯಿಂದ ದುರ್ಗಾ ನಮಸ್ಕಾರ ಪೂಜೆ ಹಾಗೂ ಕುಂಕುಮಾರ್ಚನೆ ನೆರವೇರಿತು. ಹುಣಸೂರಿನ ಶ್ರೀನಿವಾಸ್ ಮತ್ತು ತಂಡದವರಿAದ ರಸಮಂಜರಿ ಕಾರ್ಯಕ್ರಮ ಗಮನ ಸೆಳೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net