ಸಿದ್ದಾಪುರ ಮುಖ್ಯರಸ್ತೆ ದುರಸ್ತಿಗೆ ಆಗ್ರಹ

ಕರವೇ ಸ್ವಾಭಿಮಾನಿ ಬಣ ಎಚ್ಚರಿಕೆ
ಸಿದ್ದಾಪುರ ಮುಖ್ಯರಸ್ತೆ ದುರಸ್ತಿಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಣ) ಕಾರ್ಯಕರ್ತರು ಗುರುವಾರ ಕೊಡಗು ಜಿಲ್ಲಾಧಿಕಾರಿ ಮನವಿ ಸಲ್ಲಿಸಿದರು.  ಸುರೇಶ್ ನಲ್ಲಿಕಲ್, ಸಜಿಲ್ ಕುಮಾರ್, ಪಿ.ಆರ್.ಹರೀಶ್, ವೆಂಕಟೇಶ್ ಇತರರು ಇದ್ದರು.
ಸಿದ್ದಾಪುರ ಮುಖ್ಯರಸ್ತೆ ದುರಸ್ತಿಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಣ) ಕಾರ್ಯಕರ್ತರು ಗುರುವಾರ ಕೊಡಗು ಜಿಲ್ಲಾಧಿಕಾರಿ ಮನವಿ ಸಲ್ಲಿಸಿದರು. ಸುರೇಶ್ ನಲ್ಲಿಕಲ್, ಸಜಿಲ್ ಕುಮಾರ್, ಪಿ.ಆರ್.ಹರೀಶ್, ವೆಂಕಟೇಶ್ ಇತರರು ಇದ್ದರು.ದುರಸ್ತಿಗೆ ಆಗ್ರಹ
Published on: 

ಸಿದ್ದಾಪುರ: ಕೊಣನೂರು-ಮಾಕುಟ್ಟ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯ ವಿರಾಜಪೇಟೆ ತಾಲೂಕಿನ ಸಿದ್ದಾಪುರದಿಂದ ಕಾವೇರಿ ಸೇತುವೆ ವರೆಗಿನ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಕೂಡಲೇ ದುರಸ್ತಿ ಕಾಮಗಾರಿ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಣ) ಕೊಡಗು ಜಿಲ್ಲಾ ಘಟಕ ಆಗ್ರಹಿಸಿದೆ.

ಈ ಸಂಬಂಧ ಕರವೇ ಸ್ವಾಭಿಮಾನಿ ಬಣದ ಪದಾಧಿಕಾರಿಗಳು ಗುರುವಾರ ಕೊಡಗು ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಬಳಿಕ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಗಮನಕ್ಕೂ ರಸ್ತೆ ಸಮಸ್ಯೆ ತರಲಾಯಿತು.

ಸಿದ್ದಾಪುರ ಮುಖ್ಯರಸ್ತೆಯಲ್ಲಿ ದೊಡ್ಡ ಗಾತ್ರದ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ನಿತ್ಯ ಈ ರಸ್ತೆಯಲ್ಲಿ ಸಂಚರಿಸುವ ಆಟೋ ಹಾಗೂ ಟ್ಯಾಕ್ಸಿ ಚಾಲಕರು ಗುಂಡಿಗಳಿಂದಾಗಿ ವಾಹನಗಳ ದುರಸ್ತಿಗೆ ಹೆಚ್ಚಿನ ಹಣ ವ್ಯಯಿಸುವಂತಾಗಿದೆ. ದಿನದ ದುಡಿಮೆಯ ಬಹುಪಾಲು ವಾಹನ ನಿರ್ವಹಣೆಗೆ ಖರ್ಚಾಗುತ್ತಿರುವುದರಿಂದ ಚಾಲಕರಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ ಎಂದು ಸಂಘಟನೆ ತಿಳಿಸಿದೆ.

ರಸ್ತೆಯ ದುಸ್ಥಿತಿಯಿಂದ ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ವ್ಯಾಪಾರಸ್ಥರು ಕೂಡ ತೊಂದರೆ ಅನುಭವಿಸುತ್ತಿದ್ದಾರೆ. ಮಳೆಗಾಲದಲ್ಲಿ ಗುಂಡಿಗಳಲ್ಲಿ ನೀರು ನಿಂತುಕೊಳ್ಳುವುದರಿಂದ ರಸ್ತೆಯ ಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಅಪಘಾತವು ಎಚ್ಚುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ ರಸ್ತೆ ದುರಸ್ತಿ ಕಾರ್ಯಕ್ಕೆ ಕ್ರಮ ಕೈಗೊಳ್ಳಬೇಕು. 10 ದಿನಗಳೊಳಗೆ ದುರಸ್ತಿ ಕಾಮಗಾರಿ ಆರಂಭಿಸದಿದ್ದರೆ ಸಾರ್ವಜನಿಕರ ಸಹಕಾರದೊಂದಿಗೆ ರಸ್ತೆ ತಡೆಯೊಂದಿಗೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾ ಕಾರ್ಯದರ್ಶಿ ಸುರೇಶ್ ನಲ್ಲಿಕಲ್, ಜಿಲ್ಲಾ ಉಪಾಧ್ಯಕ್ಷ ಸಜಿಲ್ ಕುಮಾರ್, ಕುಶಾಲನಗರ ತಾಲೂಕು ಅಧ್ಯಕ್ಷ ಪಿ.ಆರ್.ಹರೀಶ್, ಮಡಿಕೇರಿ ತಾಲೂಕು ಕಾರ್ಮಿಕ ಘಟಕದ ಅಧ್ಯಕ್ಷ ವೆಂಕಟೇಶ್ ಸೇರಿದಂತೆ ಪದಾಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net