ಕೋದಂಡರಾಮ ಉತ್ಸವ ಮೂರ್ತಿಯ ಮೆರವಣಿಗೆ

ಕೋದಂಡರಾಮ ಉತ್ಸವ ಮೂರ್ತಿಯ ಮೆರವಣಿಗೆ
Published on

ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ಕೋದಂಡರಾಮ ಉತ್ಸವ ಮೂರ್ತಿಯ ಮೆರವಣಿಗೆ ಭಾನುವಾರ ನಡೆಯಿತು.

ಈ ಅಂಗವಾಗಿ ಶನಿವಾರ ದೇವಾಲಯದಲ್ಲಿ ಆರಾಧನೆ ನಡೆಸಿ ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ಮಾಡಲಾಯಿತು. ಭಾನುವಾರ ಕೋದಂಡರಾಮಸ್ವಾಮಿಯವರ ಉತ್ಸವ ಮೂರ್ತಿಯನ್ನು ಮಂಗಳವಾದ್ಯ ಹಾಗೂ ಜನಪದ ಕಲಾತಂಡಗಳ ಜತೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಮಹಿಳೆಯರು ಭಜನೆ ಹಾಡುವ ಮೂಲಕ ಶ್ರೀರಾಮಸ್ಮರಣೆ ಮಾಡಿದರು. ಅಂಗಡಿ ಮುಂಗಟ್ಟುಗಳವರು ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ತಮ್ಮ ಭಕ್ತಿಭಾವ ಮೆರೆದರು.

ಈ ಪೂಜಾ ಕಾರ್ಯಕ್ಕೆ ಬಣಜಿಗ ಜನಾಂಗದ ಯುವಕರು, ಮುಖಂಡರು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net