

ವಿಜಯವಾಣಿ ಸುದ್ದಿಜಾಲ ಮಡಿಕೇರಿ
ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ ಪೊಮ್ಮಾಲೆ ಕೊಡಗ್ ಕೊಡವ ಚಲನಚಿತ್ರ ಡಿ.೧೩ ರಂದು ಮಡಿಕೇರಿಯಲ್ಲಿ ತೆರೆಗೆ ಬರಲಿದೆ. ಕೊಡವ ಮಕ್ಕಡ ಕೂಟ ಅರ್ಪಿಸುವ ಸ್ವಸ್ತಿಕ್ ಎಂಟರ್‌ಟೈನ್‌ಮೆಂಟ್ ಬ್ಯಾನರ್‌ನಡಿ ನಿರ್ಮಾಪಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ನಿರ್ಮಿಸಿದ್ದಾರೆ. ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ತಮ್ಮ ವಿಧಿರ ಕಳಿಲ್ ಕಾದಂಬರಿಯನ್ನು ತೆರೆಗೆ ತಂದಿದ್ದಾರೆ.
ಅಂದು ಬೆಳಗ್ಗೆ ೧೦.೩೦ ಗಂಟೆಗೆ ನಡೆಯುವ ಚಿತ್ರ ಬಿಡುಗಡೆ ಸಮಾರಂಭದಲ್ಲಿ ಮುಖ್ಯಅತಿಥಿಗಳಾಗಿ ಮಡಿಕೇರಿ ಶಾಸಕರು, ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ಮಾಜಿ ಸಚಿವ ಮೇರಿಯಂಡ ಸಿ.ನಾಣಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ, ಎಂ.ಪಿ. ಸುನೀಲ್ ಸುಬ್ರಮಣಿ, ನಗರಸಭೆ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಶಕ್ತಿ ದಿನಪತ್ರಿಕೆ ಪ್ರಧಾನ ಸಂಪಾದಕ ಜಿ.ರಾಜೇಂದ್ರ, ಸಲಹಾ ಸಂಪಾದಕ ಬಿ.ಜಿ. ಅನಂತಶಯನ ಪಾಲ್ಗೊಳ್ಳಲಿದ್ದಾರೆ.
ಸಾಹಿತಿ ಡಾ.ಕುಶ್ವಂತ್ ಕೋಳಿಬೈಲು, ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ, ನಿರ್ಮಾಪಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್, ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ ಕೊಡವ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕೊಡವ ಮಕ್ಕಡ ಕೂಟ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮತ್ತಿತರರು ಇದ್ದರು.
ಕೊಡಗಿನ ಸಂಶೋಧನೆಗೆಂದು ಬಂದ ಯುವತಿಯೊಬ್ಬಳ ಸುತ್ತ ಹೆಣೆದ ಕಥೆಯಾಧಾರಿತ ಚಿತ್ರ ಇದಾಗಿದ್ದು, ಹಾಕತ್ತೂರಿನ ಅಮ್ಮಾಟಂಡ ಐನ್‌ಮನೆ ಸೇರಿದಂತೆ ಕೊಡಗಿನ ಸುಂದರ ತಾಣಗಳಲ್ಲಿ ಚಿತ್ರೀಕರಣಗೊಂಡಿದೆ. ೧೫ ಲಕ್ಷ ರೂ. ವೆಚ್ಚದಲ್ಲಿ ಚಿತ್ರ ನಿರ್ಮಾಣಗೊಂಡಿದೆ.
ಸಾಹಿತ್ಯ ಆಪಾಡಂಡ ಜಗ ಮೊಣ್ಣಪ್ಪ, ನಿರ್ಮಾಣ ನಿಯಂತ್ರಕರಾಗಿ ಈರಮಂಡ ವಿಜಯ್ ಉತ್ತಯ್ಯ, ಛಾಯಾಗ್ರಾಹಕರಾಗಿ ಶಿವಕುಮಾರ್ ಅಂಬಲಿ ಕಾರ್ಯನಿರ್ವಹಿಸಿದ್ದಾರೆ. ವಿಠಲ್ ರಂಗದೋಳ್ ಸಂಗೀತ ನೀಡಿದ್ದಾರೆ. ನಾಯಕನಾಗಿ ಕೇಲೆಟಿರ ಪವಿತ್, ನಾಯಕಿಯಾಗಿ ತೀತಿರ ಸೌಮ್ಯ ತನುಜ ನಟಿಸಿದ್ದಾರೆ.