ಕೊಡಗು ವಿವಿ ಮುಚ್ಚುವ ನಿರ್ಧಾರಕ್ಕೆ ಕೊಡವ ಸಮಾಜ ವಿರೋಧ

kodava samaja
Published on

ಕುಶಾಲನಗರ:

ಸಮೀಪದ ಅಳುವಾರ ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚುವ ಅಥವಾ ಇತರೆ ವಿಶ್ವವಿದ್ಯಾಲಯಗಳಿಗೆ ವಿಲೀನಗೊಳಿಸುವ ಸರ್ಕಾರದ ನಿರ್ಧಾರವನ್ನು ಕುಶಾಲನಗರ ಕೊಡವ ಸಮಾಜ ತೀವ್ರವಾಗಿ ಖಂಡಿಸುತ್ತದೆ ಎಂದು ಸಮಾಜದ ಅಧ್ಯಕ್ಷರಾದ ವಾಂಚೀರ ಮನು ನಂಜುAಡ ಹೇಳಿದ್ದಾರೆ.

ಕೊಡಗು ವಿಶ್ವವಿದ್ಯಾಲಯದಲ್ಲಿ ಕುಶಾಲನಗರ ಮತ್ತು ಸುತ್ತಮುತ್ತ ಜಿಲ್ಲೆಯ ಹಲವೆಡೆ ನೆಲೆಸಿರುವ ಬಡತನ ರೇಖೆಯ ಹಾಗೂ ಮಧ್ಯಮ ವರ್ಗದ ಹಿಂದುಳಿದ ಜನರಿಗೆ ಉನ್ನತ ಶಿಕ್ಷಣ ಜಿಲ್ಲೆಯಲ್ಲಿ ನೀಡುವ ನಿಟ್ಟಿನಲ್ಲಿ ಹಿಂದಿನ ಬಿಜೆಪಿ ಸರ್ಕಾರ ಅವಕಾಶ ಕಲ್ಪಿಸಿದೆ. ಈ ಮೂಲಕ ನೂರಾರು ಸಂಖ್ಯೆಯ ಬಡ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಲು ಅನುಕೂಲ ಕಲ್ಪಿಸುವುದರೊಂದಿಗೆ ವಿದ್ಯಾರ್ಥಿಗಳ ಹಾಗೂ ಪೋಷಕರ ಕನಸು ನನಸಾಗುತ್ತಿದೆ. ಇದೀಗ ರಾಜ್ಯ ಸರ್ಕಾರ ಇದನ್ನು ರದ್ದುಗೊಳಿಸಿ ಬೇರೆ ವಿಶ್ವವಿದ್ಯಾಲಯಕ್ಕೆ ವಿಲೀನಗೊಳಿಸುವ ಕಾಯಕಕ್ಕೆ ಚಿಂತನೆ ಮಾಡಿರುವುದು ವಿಪರ್ಯಾಸವಾಗಿದೆ ಎಂದು ಭಾನುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಪ್ರಸಕ್ತ ಸರ್ಕಾರದ ಗ್ಯಾರಂಟಿ ಯೋಜನೆಗಳ ಮೂಲಕ ಶಿಕ್ಷಣ ಇಲಾಖೆಗೆ ಕುತ್ತು ತರುವುದು ಸರಿಯಲ್ಲ. ಯಾವುದೇ ಸಂದರ್ಭದಲ್ಲಿಯೂ ಕೊಡಗು ವಿಶ್ವವಿದ್ಯಾಲಯವನ್ನು ಜಿಲ್ಲೆಯ ಅಳುವಾರದಲ್ಲಿ ಉಳಿಸಿಕೊಂಡು ಅಭಿವೃದ್ಧಿಗೊಳಿಸುವ ಕೆಲಸ ಆಗಬೇಕು. ಇಲ್ಲದಿದ್ದರೆ ಕುಶಾಲನಗರ ಕೊಡವ ಸಮಾಜ ಸೇರಿದಂತೆ ಜಿಲ್ಲೆಯ ಸಮಾಜಗಳ ಜೊತೆ ಕೈಜೋಡಿಸಿ ಉಗ್ರ ಪ್ರತಿಭಟನೆ ಮಾಡಲಾಗುವುದು.

ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ತರಗತಿಗಳಲ್ಲಿ ಉತ್ತಮ ಅಂಕ ಪಡೆದು ರಾಜ್ಯಕ್ಕೆ ಎರಡು ಅಥವಾ ಮೂರನೇ ಸ್ಥಾನ ಪಡೆಯುತ್ತಿದ್ದಾರೆ. ಪದವಿ ವ್ಯಾಸಂಗ ನಂತರ ಉನ್ನತ ವ್ಯಾಸಂಗಕ್ಕೆ ಜಿಲ್ಲೆಯಲ್ಲಿ ಇರುವ ವಿಶ್ವವಿದ್ಯಾಲಯದಿಂದ ತುಂಬಾ ಅನುಕೂಲ ಆಗಿದೆ. ಸÀರ್ಕಾರ ವಿಶ್ವವಿದ್ಯಾಲಯವನ್ನು ರದ್ದುಗೊಳಿಸುವ ನಿರ್ಧಾರ ಕೈ ಬಿಟ್ಟು ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಚಿಂತನೆ ಹರಿಸಬೇಕು. ಈ ಸಂಬAಧ ವಿಶ್ವವಿದ್ಯಾಲಯ ಹಿತ ರಕ್ಷಣಾ ಬಳಗ ಕೈಗೊಳ್ಳುವ ಎಲ್ಲಾ ಹೋರಾಟಕ್ಕೂ ಸಮಾಜ ಬೆಂಬಲ ವ್ಯಕ್ತಪಡಿಸುತ್ತದೆ ಎಂದು ತಿಳಿಸಿದರು.

ಕುಶಾಲನಗರ ಕೊಡವ ಸಮಾಜದ ಉಪಾಧ್ಯಕ್ಷ ಪುಲಿಯಂಡ ಎಂ. ಚೆಂಗಪ್ಪ, ಕಾರ್ಯದರ್ಶಿ ಆಯಿಲಪಂಡ ಸಂಜು ಬೆಳ್ಳಿಯಪ್ಪ, ಜಂಟಿ ಕಾರ್ಯದರ್ಶಿ ಮೈಂದಪAಡ ಜಗದೀಶ್, ನಿರ್ದೇಶಕರಾದ ಅಂಜಪರವAಡ ತಮ್ಮಯ್ಯ, ಮತ್ತು ಸಿದ್ದಂಡ ಮಹೇಶ ಸುದ್ದಿಗೋಷ್ಠಿಯಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net