ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ 'ಕೊಡಗರು' ಎಂದು ಸಂಬೋಧಿಸಲ್ಪಡುತ್ತಿದ್ದ ಶಬ್ದವನ್ನು "ಕೊಡವ" ಎಂಬುದಾಗಿ ತಿದ್ದುಪಡಿ ಮಾಡಿಸಿರುವುದು, ಕೋವಿ ಹಕ್ಕಿನ ಬಗ್ಗೆ ನಿರ್ದಿಷ್ಟವಾದ ನಿರ್ಧಾರ ಕೈಗೊಳ್ಳಲು ಕ್ರಮ ಕೈಗೊಂಡಿರುವುದು, ನಮ್ಮನ್ನು ದಶಕಗಳಿಂದ ಕಾಡುತ್ತಿರುವ ಜಮ್ಮಾ ಬಾಣೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿರುವುದು ಮಾತ್ರವಲ್ಲದೆ, ಕೊಡವ ಜನಾಂಗದವರು ಹಾಗೂ ಈ ನಾಡಿನ ಎಲ್ಲಾ ಜನಾಂಗದವರ ಅಭಿವೃದ್ಧಿಗೆ ವಿಶೇಷ ಅನುದಾನ ಗಳನ್ನು ತಂದು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು, ಜನರು ನನಗೆ ನೀಡಿದ ಅಧಿಕಾರದ ಸದ್ಬಳಕೆಗಾಗಿ ಹಾಗೂ ನಾಡಿನ ಏಳಿಗೆಗಾಗಿ ಎಂದು ಬಣ್ಣಿಸಿದರು.