ಭದ್ರೆಗೆ ಕೊಡಿಸಿ ರಾಷ್ಟ್ರೀಯ ಮುದ್ರೆ

HYR bhadra 13
Published on

ಹಿರಿಯೂರು: ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ, ಕಾಮಗಾರಿ ತ್ವರಿತ ಪೂರ್ಣಕ್ಕೆ ಸಂಸತ್‌ನಲ್ಲಿ ಧ್ವನಿ ಎತ್ತುವಂತೆ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಗೆ ತಾಲೂಕು ನೀರಾವರಿ ಹೋರಾಟ ಸಮಿತಿ ಸದಸ್ಯರು ಬುಧವಾರ ಮನವಿ ಸಲ್ಲಿಸಿದರು.

ಬೆಂಗಳೂರಿನ ಅವರ ನಿವಾಸಕ್ಕೆ ತೆರಳಿ ಮನವಿ ಸಲ್ಲಿಸಿದ ರೈತರು, ಕೇಂದ್ರ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಮೀಸಲಿಟ್ಟಿದ್ದು, ಇಲ್ಲಿಯವರೆಗೂ ಬಿಡುಗಡೆಯಾಗಿಲ್ಲ. ರಾಷ್ಟ್ರೀಯ ಯೋಜನೆ ಘೋಷಣೆಗೆ ವಿನಾಕಾರಣ ವಿಳಂಬ ಮಾಡಲಾಗುತ್ತಿದೆ. ಈ ಬಗ್ಗೆ ಲೋಕಸಭೆ ಅಧಿವೇಶನದಲ್ಲಿ ಕೇಂದ್ರದ ಗಮನ ಸೆಳೆಯುವಂತೆ ಮನವಿ ಮಾಡಿದರು.

ಸಕಾರಾತ್ಮಕ ಸ್ಪಂದನೆ: ರಾಜ್ಯದ ನೆಲ, ಜಲ, ಭಾಷೆ, ಕರುನಾಡಿನ ಅಸ್ಮಿತೆ ಕಾಪಾಡಲು ನನ್ನ ಕೊನೆ ಉಸಿರಿರುವರೆಗೆ ಹೋರಾಟ ಮಾಡಲಾಗುವುದು. ಭದ್ರಾ ಮೇಲ್ದಂಡೆ ಯೋಜನೆ ತ್ವರಿತ ಪೂರ್ಣ, ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವಂತೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯಲಾಗುವುದು. ಶೀಘ್ರ ಮೋದಿ ಅವರನ್ನು ಭೇಟಿ ನೀಡಿ ಮನವಿ ಮಾಡಲಾಗುವುದು ಎಂದು ದೇವೇಗೌಡರು ಭರವಸೆ ನೀಡಿದರು.

ರೈತ ಮುಖಂಡರಾದ ಸಿದ್ದರಾಮಣ್ಣ, ಶಿವಕುಮಾರ್, ಕೃಷಿಕ ಸಮಾಜದ ಅಧ್ಯಕ್ಷ ಎಚ್.ಆರ್.ತಿಮ್ಮಯ್ಯ, ದೃವಕುಮಾರ್, ಎಂ.ಎಂ. ಮಣಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net