

ಮಂಗಳೂರು:ನಗರದ ಕೋಡಿಕಲ್ ನ ನಾಗಬ್ರಹ್ಮ ದೇವಸ್ಥಾನದ ನಾಗನ ಕಲ್ಲನ್ನು ದುಷ್ಕರ್ಮಿಗಳು ಧ್ವಂಸ ಮಾಡಿದ್ದಾರೆ.
ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಶನಿವಾರ ಬೆಳಕಿಗೆ ಬಂದಿದೆ. ಘಟನಾ ಸ್ಥಳದಲ್ಲಿ ವಿಶ್ವ ಹಿಂದು ಪರಿಷತ್ ಬಜರಂಗದಳ ಕಾರ್ಯಕರ್ತರು ಹಾಗು ಸ್ಥಳೀಯರು ಪ್ರತಿಭಟನೆ ನಡೆಸಿ ದುಷ್ಕರ್ಮಿಗಳನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹಾಗು ವಿಶ್ವಹಿಂದು ಪರಿಷತ್ ಮುಖಂಡ ಶರಣ್ ಪಂಪುವೆಲ್ ಮೊದಲಾದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.