ಕೊಕ್ಕಡ ಮನೆ ದರೋಡೆ ಪ್ರಕರಣದ 9 ಮಂದಿ ವಶ

Kokkada robbery
Published on

ಬೆಳ್ತಂಗಡಿ: ಕೊಕ್ಕಡ ಸೌತಡ್ಕ ಸಮೀಪದ ಕೌಕ್ರಾಡಿ ಗ್ರಾಮದ ನೂಜೆ ನಿವಾಸಿ ತುಕ್ರಪ್ಪ ಶೆಟ್ಟಿಯವರ ಮನೆ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ 9 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಬ್ದುಲ್ ರವೂಫ್ (24), ರಾಮ ಮೂರ್ತಿ (23) ಅಶ್ರಫ್ ಪೆರಾಡಿ(27), ಸಂತೋಷ್ (24), ನವೀದ್(36), ರಮಾನಂದ ಎನ್.ಶೆಟ್ಟಿ(48), ಸುಮನ್(24), ಸಿದ್ದಿಕ್(27), ಅಲಿಕೋಯಾ ಬಂಧಿತರಾಗಿದ್ದು, ಆರೋಪಿಗಳಿಂದ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ತಂಡವು ಬೆಂಗಳೂರು ವಿಜಯನಗರದಲ್ಲಿ ಮನೆಕಳ್ಳತನಕ್ಕೆ ಯತ್ನ, ಅರೆಹಳ್ಳಿ ಪೊಲೀಸ್‌ಠಾಣೆ ವ್ಯಾಪ್ತಿಯಲ್ಲಿ ದರೋಡೆ, ಪುಂಜಾಲಕಟ್ಟೆಯಲ್ಲಿ ಮನೆಕಳ್ಳತನ, ಮೂಡುಬಿದಿರೆ, ಬಜಪೆ, ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಸರಣಿ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ.

ಆರೋಪಿಗಳ ವಿಚಾರಣೆಯ ಬಳಿಕ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net