

ಮೂಲ್ಕಿ: ಭಾರತೀಯರಾಗಲು ಯೋಗ ಹಾಗೂ ಯೋಗ್ಯತೆ ಬೇಕು. ಸಂಸ್ಕಾರ ಹಾಗೂ ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ಸರಳ ಸಜ್ಜನಿಕೆ ಜೀವನದ ಮೂಲಕ ಸಮಾಜಮುಖಿಯಾಗಿ ಯುವ ಸಮಾಜಕ್ಕೆ ಆದರ್ಶಪ್ರಾಯರಾಗಬೇಕು ಎಂದು ಧಾರ್ಮಿಕ ಚಿಂತಕ ಕೊಲಕಾಡಿ ವಾದಿರಾಜ ಉಪಾಧ್ಯಾಯ ಹೇಳಿದರು.
ಮೂಲ್ಕಿ ಕೆ.ಎಸ್.ರಾವ್ ನಗರದ ವೀರಕೇಸರಿ ತರುಣ ವೃಂದ ಮತ್ತು ಮಾತೃ ಬಳಗ ವತಿಯಿಂದ 15ನೇ ವರ್ಷದ ಯುಗಾದಿ ಉತ್ಸವ ಹಾಗೂ 5ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಸುಧಾಮ ಫೌಂಡೇಶನ್ ಅಧ್ಯಕ್ಷ ಸುನಿಲ್ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಬಜರಂಗದಳ ಜಿಲ್ಲಾ ಸಂಯೋಜಕ ನವೀನ್ ಮೂಡುಶೆಡ್ಡೆ ಉದ್ಘಾಟಿಸಿದರು. ಹಿಂದು ಜಾಗರಣ ವೇದಿಕೆ ಪ್ರಾಂತ ಕಾರ್ಯಕಾರಣಿ ಸದಸ್ಯ ಶ್ರೀಕಾಂತ್ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಿದರು.
ಮೂಲ್ಕಿ ನಗರ ಪಂಚಾಯಿತಿ ಅಧ್ಯಕ್ಷ ಸತೀಶ್ ಅಂಚನ್, ಮಂಗಳೂರು ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಮನೋಜ್ ಕೋಡಿಕೆರೆ, ವಿಜಯ ರೈತ ಸೇವಾ ಸಹಕಾರಿ ಸಂ ಅಧ್ಯಕ್ಷ ರಂಗನಾಥ ಶೆಟ್ಟಿ, ಉದ್ಯಮಿ ಪ್ರಶಾಂತ್ ಕಾಂಚನ್, ವೀರಣ್ಣ ಅರಳಗುಂಡಿಗಿ, ವೀರ ಕೇಸರಿ ತರುಣ ವೃಂದ ಅಧ್ಯಕ್ಷ ಶರಣ್ ವಾಲಿಕರ್, ವಾತೃ ಬಳಗ ಅಧ್ಯಕ್ಷೆ ವಿಶಾಲಾಕ್ಷಿ ಕೆ.ಹಿರೇಮಠ ಮತ್ತಿತರರು ಉಪಸ್ಥಿತರಿದ್ದರು.
ಶರಣ್ ವಾಲಿಕರ್ ಸ್ವಾಗತಿಸಿದರು. ಸಂತೋಷ್ ನಂಬಿಯಾರ್ ಹಾಗೂ ವಾತೃ ಬಳಗ ಪ್ರಧಾನ ಕಾರ್ಯದರ್ಶಿ ಸಂಗೀತಾ ನಿರೂಪಿಸಿದರು.