ಮಹೇಶ್ ಶೆಟ್ಟಿವಿರುದ್ಧ ಕೋಲಾರ ವೇದಿಕೆ ದೂರು

Published on

ಮಂಗಳೂರು: ನಕಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ತಂಡದ ವಿರುದ್ಧ ಕೋಲಾರ ಜಿಲ್ಲಾ ಜನಪರ ವೇದಿಕೆ ಅಧ್ಯಕ್ಷ ನಾಗರಾಜ್ ಹಾಗೂ ತಂಡ ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಆಗಮಿಸಿ ದೂರು ನೀಡಿದೆ. ತಿಮರೋಡಿ, ತಂಡದ ವಿರುದ್ಧ ಕೋಕಾ, ಗೂಂಡಾ ಕಾಯ್ದೆ ಮತ್ತು ಗಡಿಪಾರು ಅಡಿಯಲ್ಲಿ ಕೇಸು ದಾಖಲಿಸುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ.

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟೆಣ್ಣವರ್, ವಿಠಲ್ ಗೌಡ, ಯು ಟ್ಯೂಬರ್ ಸಮೀರ್, ಜಯಂತ್ ಮತ್ತು ಇನ್ನಿತರರ ವಿರುದ್ಧ ಈ ದೂರು ನೀಡಲಾಗಿದೆ. ಪುಣ್ಯಕ್ಷೇತ್ರ ಧರ್ಮಸ್ಥಳದ ವಿರುದ್ಧ ಆರೋಪ ಮಾಡುತ್ತಿರುವ ಬುರುಡೆ ಗ್ಯಾಂಗ್‌ನ ಷಡ್ಯಂತರ ವಿರುದ್ಧ ಕ್ರಮವಹಿಸಿ. ಶ್ರೀ ಕ್ಷೇತ್ರಕ್ಕೆ ಮಸಿ ಬಳಿಯಲು ಉನ್ನಾರ ನಡೆಸುತ್ತಿರುವ ಈ ಎಲ್ಲ ಸದಸ್ಯರ ವಿರುದ್ಧ ತುರ್ತು ಕ್ರಮ ವಹಿಸಬೇಕು. ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ಕುಟುಂಬದವರ ವಿರುದ್ಧ ವಿನಾಕಾರಣ ಸೂಕ್ತ ದಾಖಲೆ ಇಲ್ಲದೇ ಆರೋಪ ಮಾಡಿದ್ದಾರೆ. ಆದ್ದರಿಂದ ಈ ಎಲ್ಲ ಬುರುಡೆ ಗ್ಯಾಂಗ್ ಸದಸ್ಯರ ವಿರುದ್ಧ ಕೋಕಾ ಮತ್ತು ಗೂಂಡಾ ಕಾಯ್ದೆಯ ಅನ್ವಯ ಪ್ರಕರಣ ದಾಖಲಿಸಬೇಕು. ಇವರೆಲ್ಲರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಬೇಕು. ಇವರುಗಳಿಗೆ ವಿದೇಶಗಳಿಂದ ಹಣದ ಹೊಳೆ ಹರಿದು ಬಂದಿರುವ ಸಾಧ್ಯತೆ ಇದೆ. ಕಾನೂನು ಬಾಹಿರವಾಗಿ ಪಡೆದುಕೊಂಡಿರುವ ಹಣದ ಮೂಲವನ್ನು ಪತ್ತೆ ಹಚ್ಚಬೇಕು. ಇವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿ ಸರ್ಕಾರಕ್ಕೆ ಆಗಿರುವ ಹಾನಿಯನ್ನು ಭರಿಸಬೇಕು. ಶ್ರೀ ಕ್ಷೇತ್ರದ ವಿರುದ್ಧ ಮಾಡಿರುವ ಗುರುತರ ಸುಳ್ಳು ಆರೋಪಗಳಿಗೆ ಮಾನಹಾನಿ ಪ್ರಕರಣ ದಾಖಲಿಸಿ ಎಂದು ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net