ಕೋಲಾರ ಸಂಸದರಿಂದ ಕೇಂದ್ರ ರಕ್ಷಣಾ ಸಚಿವರ ಭೇಟಿ

ರಕ್ಷಣಾ ಸಚಿವರ ಭೇಟಿಯಾದ ಕೋಲಾರ ಸಂಸದ
Published on

ಬೆಮೆಲ್ ಹೊರ ಗುತ್ತಿಗೆ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಮನವಿ

ಕೋಲಾರ: ಹಲವು ಬೇಡಿಕೆಗಳ ಈಡೇರಿಕೆಗಾಗಿ ಕಳೆದ 21 ದಿನಗಳಿಂದ ಬೆಮೆಲ್ ಹೊರ ಗುತ್ತಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದು, ಬೆಮೆಲ್ ನೌಕರರ ಬೇಡಿಕೆಗಳ ಈಡೇರಿಕೆಗಾಗಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಕೋಲಾರ ಸಂಸದ ಮಲ್ಲೇಶ್‌ಬಾಬು ಅವರು ಸೋಮವಾರ ನವದೆಹಲಿಯ ಕೇಂದ್ರ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಕೋಲಾರ ಜಿಲ್ಲೆಯ ಕೆಜಿಎಫ್‌ನಲ್ಲಿರುವ ಬೆಮೆಲ್ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಚಿವರಿಗೆ ವಿವರಿಸಿದರು. ಸತತ 21 ದಿನಗಳಿಂದ ಬೆಮೆಲ್ ಕಾರ್ಮಿಕರು ಕೆಲಸವನ್ನು ಬಹಿಷ್ಕರಿಸಿ ಪ್ರತಿಭಟನೆ ಮಾಡುತ್ತಿದ್ದಾರೆ, ಅವರ ಬೇಡಿಕೆ ಪರಿಶೀಲಿಸಿ, ಸ್ಪಂದಿಸುವಂತೆ ಮನವಿ ಮಾಡಿದರು.

ಈಗಾಗಲೇ ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿಕುಮಾರಸ್ವಾಮಿ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದ್ದು, ಬೆಮೆಲ್ ರಕ್ಷಣಾ ಇಲಾಖೆಯ ವ್ಯಾಪ್ತಿಗೆ ಒಳಪಡುವುದರಿಂದ ರಕ್ಷಣಾ ಸಚಿವರ ಬಳಿ ಚರ್ಚಿಸುವ ಬಗ್ಗೆ ತಿಳಿಸಿದ್ದಾರೆ. ರಕ್ಷಣಾ ಸಚಿವರು ತಕ್ಷಣ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು.

ಸಂಸದರ ಮನವಿ ಸ್ವೀಕರಿಸಿದ ರಕ್ಷಣಾ ಸಚಿವರು ಎಲ್ಲ ಅಧಿಕಾರಿ ವರ್ಗವರೊಂದಿಗೆ ಚರ್ಚಿಸಿ ಇನ್ನು 2-3 ದಿನಗಳಲ್ಲಿ ಬೆಮೆಲ್ ಕಾರ್ಮಿಕರ ಸಮಸ್ಯೆಗಳಿಗೆ ಸಂಪೂರ್ಣ ಪರಿಹಾರ ನೀಡುವುದಾಗಿ ಭರವಸೆ ನೀಡಿರುವುದಾಗಿ ಸಂಸದರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net