ಸಂಘದ ಕೆಜಿಎಫ್ ತಾಲೂಕು ಅಧ್ಯಕ್ಷ ಅಭಿಲಾಷ್ ರೆಡ್ಡಿ ಮಾತನಾಡಿ, ತ್ವರಿತವಾಗಿ ನೋಂದಣಿ ಸ್ಥಗಿತಗೊಳಿಸಿದ್ದರಿಂದ ಬಹುತೇಕ ಮಾವು ಬೆಳೆಗಾರರು ಸೌಲಭ್ಯದಿಂದ ವಂಚಿತರಾಗಿದ್ದಾರೆ. ಜಿಲ್ಲೆಯಲ್ಲಿ ಸುಮಾರು 5,20,000 ಟನ್ ತೋತಾಪುರಿ ಮಾವು ಬೆಳೆಯಲಾಗುತ್ತಿದ್ದು, ಸರ್ಕಾರ ಕೇವಲ 1,30,000 ಟನ್ ಖರೀದಿಗೆ ಮಾತ್ರ ಯೋಜನೆ ರೂಪಿಸಿದೆ. ಇದನ್ನು ಹೆಚ್ಚಿಸಬೇಕು ಎಂದು ಪಟ್ಟು ಹಿಡಿದರು.