ಗ್ಯಾರಂಟಿ ಮಾಹಿತಿ ತಲುಪಿಸುವಲ್ಲಿ ವಿಫಲ

ಅಧಿಕಾರಿಗಳ ಕಾರ್ಯವೈಖರಿಗೆ ಅನುಷ್ಠಾನ ಸಮಿತಿ ಅಧ್ಯಕ್ಷ ರಾಧಾಕೃಷ್ಣಾರೆಡ್ಡಿ ಬೇಸರ
ಕೆಜಿಎಫ್​ ತಾಲೂಕು ಆಡಳಿತ ಸೌಧದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಮಿತಿ ಅಧ್ಯಕ್ಷ ರಾಧಾಕೃಷ್ಣರೆಡ್ಡಿ, ತಾಪಂ ಇಒ ವೆಂಕಟೇಶಪ್ಪ ಹಾಗೂ ಸಮಿತಿ ಸದಸ್ಯರು ಇದ್ದರು.
ಕೆಜಿಎಫ್​ ತಾಲೂಕು ಆಡಳಿತ ಸೌಧದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಮಿತಿ ಅಧ್ಯಕ್ಷ ರಾಧಾಕೃಷ್ಣರೆಡ್ಡಿ, ತಾಪಂ ಇಒ ವೆಂಕಟೇಶಪ್ಪ ಹಾಗೂ ಸಮಿತಿ ಸದಸ್ಯರು ಇದ್ದರು.
Published on: 

ಕೆಜಿಎಫ್​: ರಾಜ್ಯ ಸರ್ಕಾರ ಬಡವರು, ಮಧ್ಯಮ ವರ್ಗದವರು ಹಾಗೂ ಸಾಮಾನ್ಯ ಜನರ ಆರ್ಥಿಕ ಸಬಲೀಕರಣಕ್ಕಾಗಿ ಪ್ರತಿ ತಿಂಗಳು ಕೋಟ್ಯಂತರ ರೂ. ವೆಚ್ಚ ಮಾಡಿ ಜಾರಿಗೊಳಿಸುತ್ತಿರುವ ಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಸಮರ್ಪಕ ಮಾಹಿತಿ ತಲುಪಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಧಾಕೃಷ್ಣರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದರು.

ತಾಲೂಕು ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಮೂರು ವರ್ಷಗಳಿಂದ ಗೃಹಲ್ಮ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ ಹಾಗೂ ಶಕ್ತಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿದೆ. ಆದರೆ, ಸರ್ಕಾರದ ಯೋಜನೆಗಳ ಪ್ರಯೋಜನಗಳು ಜನರಿಗೆ ತಲುಪುತ್ತಿರುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವಲ್ಲಿ ಅಧಿಕಾರಿಗಳು ನಿರೀತ ಮಟ್ಟದಲ್ಲಿ ತೊಡಗಿಸಿಕೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಜನರಿಗೆ ಸಂಪೂರ್ಣ ಅರಿವು ಮೂಡಿಸುವುದು ಅಧಿಕಾರಿಗಳ ಕರ್ತವ್ಯ. ಅಧಿಕಾರಿಗಳು ಇನ್ನಾದರೂ ಜವಾಬ್ದಾರಿ ಅರಿತು ಮನೆಮನೆಗೂ ಯೋಜನೆಗಳ ಮಾಹಿತಿ ತಲುಪಿಸಲಿ ಎಂದರು.

ತಾಪಂ ಇಒ ವೆಂಕಟೇಶಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಸಂಪತ್​ ಕುಮಾರ್​, ರಾಮಕೃಷ್ಣಾರೆಡ್ಡಿ, ಭೀಮಗಾನಹಳ್ಳಿ ರವಿ, ವೇಣುಗೋಪಾಲಗೌಡ, ಸನಾವುಲ್ಲಾ, ಇರ್ಫಾನ್​, ಚಾರ್ಲೆಸ್​, ವಿಷ್ಣು, ಶಿವ ಇದ್ದರು.

ಯೋಜನೆ ಪ್ರಯೋಜನಗಳನ್ನು ಜನರಿಗೆ ತಲುಪಿಸಿ: ಪ್ರತಿ ಇಲಾಖೆಯ ಅಧಿಕಾರಿಗಳು ಕಚೇರಿ ಮುಂಭಾಗದಲ್ಲಿ ತಮ್ಮ ಇಲಾಖೆಯ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಎಷ್ಟು ಫಲಾನುಭವಿಗಳು ಸೌಲಭ್ಯ ಪಡೆದಿದ್ದಾರೆ. ಎಷ್ಟು ಹಣ ಬಿಡುಗಡೆಯಾಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು. ಕೇವಲ ಸಭೆಗಳಿಗೆ ಹಾಜರಾಗಿ ವರದಿ ನೀಡುವುದಷ್ಟೇ ಅಧಿಕಾರಿಗಳ ಕೆಲಸವಾಗಬಾರದು. ಸರ್ಕಾರದ ಯೋಜನೆಗಳ ಉದ್ದೇಶ ಹಾಗೂ ಪ್ರಯೋಜನಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಜವಾಬ್ದಾರಿಯನ್ನೂ ಅಧಿಕಾರಿಗಳು ನಿರ್ವಹಿಸಬೇಕು ಎಂದು ರಾಧಕೃಷ್ಣರೆಡ್ಡಿ ಸೂಚಿಸಿದರು.

ಫಲಾನುಭವಿಗಳಿಗೆ ₹294.58 ಕೋಟಿ ಪಾವತಿ: ಗೃಹಲ್ಮ ಯೋಜನೆಯಡಿ ಕಳೆದ 33 ತಿಂಗಳ ಅವಧಿಯಲ್ಲಿ 15,42,311 ಫಲಾನುಭವಿಗಳ ಪಾವತಿ ದಾಖಲೆಗಳ ಪೈಕಿ 14,27,699 ಫಲಾನುಭವಿಗಳಿಗೆ ಒಟ್ಟು 294.58 ಕೋಟಿ ರೂ. ಪಾವತಿಸಲಾಗಿದೆ. ಪ್ರತಿ ತಿಂಗಳು ಸುಮಾರು 9.62 ಕೋಟಿ ರೂ. ಫಲಾನುಭವಿಗಳ ಖಾತೆಗಳಿಗೆ ಜಮೆಯಾಗುತ್ತಿದೆ. ತಾಲೂಕಿನಲ್ಲಿ ಒಟ್ಟು 95 ನ್ಯಾಯಬೆಲೆ ಅಂಗಡಿಗಳಿದ್ದು, ಅಂತ್ಯೋದಯ ಅನ್ನ ಯೋಜನೆಯಡಿ 14,858, ಬಿಪಿಎಲ್​ ವಿಭಾಗದಲ್ಲಿ 1,56,304 ಹಾಗೂ ಎಪಿಎಲ್​ ವಿಭಾಗದಲ್ಲಿ 5,379 ಸೇರಿ ಒಟ್ಟು 1,76,541 ಪಡಿತರ ಚೀಟಿಗಳಿವೆ. ಅರ್ಹ ಪಡಿತರ ಚೀಟಿದಾರರಿಗೆ ಯೋಜನೆಯಡಿ ಆಹಾರ ಧಾನ್ಯ ವಿತರಿಸಲಾಗುತ್ತಿದೆ ಎಂದು ರಾಧಾಕೃಷ್ಣರೆಡ್ಡಿ ವಿವರಿಸಿದರು.

821 ಮಂದಿ ಪದವೀಧರರ ನೋಂದಣಿ: ಯುವನಿಧಿ ಯೋಜನೆಯಡಿ ತಾಲೂಕಿನಲ್ಲಿ 790 ಪದವೀಧರರು ಹಾಗೂ 31 ಡಿಪ್ಲೊಮಾ ಪದವೀಧರರು ಸೇರಿ ಒಟ್ಟು 821 ಮಂದಿ ನೋಂದಾಯಿಸಿಕೊಂಡಿದ್ದು, ಅರ್ಹ ಫಲಾನುಭವಿಗಳಿಗೆ ಪ್ರತಿ ತಿಂಗಳು ಡಿಬಿಟಿ ಮೂಲಕ 1,500 ರೂ. ವರ್ಗಾವಣೆ ಮಾಡಲಾಗುತ್ತಿದೆ ಎಂದು ರಾಧಾಕೃಷ್ಣರೆಡ್ಡಿ ತಿಳಿಸಿದರು.

ಶಕ್ತಿಗೆ ₹264.74 ಕೋಟಿ ವಿನಿಯೋಗ: ರಾಜ್ಯ ಸರ್ಕಾರದ ಮಹತ್ವಾಕಾಂೆಯ ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತ ಬಸ್​ ಪ್ರಯಾಣದ ಸೌಲಭ್ಯ ಪಡೆಯುತ್ತಿದ್ದಾರೆ. ಕಳೆದ 33 ತಿಂಗಳ ಅವಧಿಯಲ್ಲಿ ತಾಲೂಕಿನಲ್ಲಿ ಈ ಯೋಜನೆಗಾಗಿ 264.74 ಕೋಟಿ ಹಣ ವಿನಿಯೋಗಿಸಲಾಗಿದೆ ಎಂದು ರಾಧಾಕೃಷ್ಣರೆಡ್ಡಿ ಹೇಳಿದರು.