ಜಿಲ್ಲೆಯಲ್ಲಿ ಒಟ್ಟು 44,716.24 ಹೆಕ್ಟೇರ್‌ನಲ್ಲಿ ಮಾವು ಬೆಳೆಯಿದ್ದು, ಸುಮಾರು 25 ರಿಂದ 30 ಲಕ್ಷ ಟನ್ ಇಳುವರಿ ಅಂದಾಜಿಸಲಾಗಿದೆ. ಶ್ರೀನಿವಾಸಪುರ, ಮುಳಬಾಗಿಲು ತಾಲೂಕು ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಮಾವು ಬೆಳೆಯುತ್ತಾರೆ. ಕೋಲಾರ, ಕೆಜಿಎಫ್, ಮಾಲೂರು, ಬಂಗಾರಪೇಟೆ ರೈತರು ಮಾವು ಉತ್ಪಾದನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯದ ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಮೈಸೂರು ಭಾಗದಲ್ಲೂ ಸಹ ಮಾವು ಬೆಳೆಯುವಲ್ಲಿ ರೈತರು ಮುಂಚೂಣಿಯಲ್ಲಿದ್ದಾರೆ.