

ಮಾಲೂರು: ರಾಜ್ಯ ಸರ್ಕಾರದ ಮಹತ್ವಾಕಾಂ "ಪ್ರಜಾಸೇವಾ' ಕಾರ್ಯಕ್ರಮವು ಕೇವಲ ಕಾಗದಪತ್ರಗಳ ವಿಲೇವಾರಿಗೆ ಸೀಮಿತವಾಗದೆ, ಸಾರ್ವಜನಿಕರ ದೀರ್ಕಾಲದ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ವೇದಿಕೆಯಾಗಬೇಕು. ಈ ಕಾರ್ಯಕ್ರಮದ ಉದ್ದೇಶ ಯಶಸ್ವಿಯಾಗಬೇಕಾದರೆ ಪ್ರತಿ ಗ್ರಾಮ ಹಾಗೂ ನಗರ ವ್ಯಾಪ್ತಿಯ ನಾಗರಿಕರಿಗೂ ಸಮರ್ಪಕ ಮಾಹಿತಿ ತಲುಪಬೇಕು. ಮಾಹಿತಿ ಕೊರತೆಯಿಂದ ಸಾರ್ವಜನಿಕರು ವಂಚಿತರಾದರೆ ಅದಕ್ಕೆ ಆಯಾ ಇಲಾಖೆಯ ತಾಲೂಕುಮಟ್ಟದ ಅಧಿಕಾರಿಗಳೇ ಹೊಣೆಗಾರರಾಗಲಿದ್ದಾರೆ ಎಂದು ಶಾಸಕ ಕೆ.ವೈ.ನಂಜೇಗೌಡ ಎಚ್ಚರಿಕೆ ನೀಡಿದರು.
ನಗರಸಭಾ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪ್ರಜಾಸೇವಾ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿ, ತಾಲೂಕಿನ ಹೋಬಳಿ ಮಟ್ಟದಲ್ಲಿ ಈಗಾಗಲೇ ನಾಲ್ಕು ಹಂತಗಳಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದ್ದು, ಇದೀಗ ನಗರಸಭೆ ಹಾಗೂ ತಾಲೂಕುಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಗ್ರಾಪಂ ಆಡಳಿತಾಧಿಕಾರಿ, ಪಿಡಿಒ, ನಗರಸಭೆ ಆಯುಕ್ತರು, ಕಂದಾಯ ಇಲಾಖೆಯ ಅಧಿಕಾರಿಗಳು ಕೇವಲ ವಾಹನಗಳಲ್ಲಿ ಪ್ರಚಾರ ಮಾಡುವುದಕ್ಕೆ ಸೀಮಿತವಾಗದೆ, 28 ಗ್ರಾಪಂಗಳ ವ್ಯಾಪ್ತಿಯಲ್ಲೂ ಕರಪತ್ರಗಳ ಮುಖಾಂತರ ಮನೆ&ಮನೆಗೆ ತಲುಪಿಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.
ಪಟ್ಟಣದಲ್ಲಿ ನಡೆಯುತ್ತಿರುವ ಮೇಲ್ಸೇತುವೆ (್ಲೆ$ ಓವರ್) ಹಾಗೂ ಹೆದ್ದಾರಿ ಕಾಮಗಾರಿಗಳ ಕಾರಣದಿಂದ ಸಾರ್ವಜನಿಕರು ಮತ್ತು ಕೆಎಸ್ಆರ್ಟಿಸಿ ಬಸ್ಗಳು ನಿತ್ಯ ಗಂಟೆಗಟ್ಟಲೆ ಸಂಚಾರ ದಟ್ಟಣೆಯಲ್ಲಿ ಸಿಲುಕುತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಕೆಎಸ್ಆರ್ಟಿಸಿ ಡಿಸಿ ಹಾಗೂ ಸಾರ್ವಜನಿಕರ ಸಮಸ್ಯೆಯನ್ನು ಆಲಿಸಿದ ಶಾಸಕರು, ಸ್ಥಳದಲ್ಲಿದ್ದ ಕೆಶಿಪ್ ಹಾಗೂ ಗುತ್ತಿಗೆದಾರ ಸಂಸ್ಥೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಮುಖ್ಯ ಕಾಮಗಾರಿಯ ಜತೆಗೆ ಸರ್ವೀಸ್ ರಸ್ತೆಯನ್ನು ಮೊದಲು ಸುಸ್ಥಿತಿಯಲ್ಲಿ ನಿರ್ವಹಿಸಬೇಕು, ರಸ್ತೆಗುಂಡಿಗಳನ್ನು ಮುಚ್ಚಿ ವಾಹನ ಸಂಚಾರ ಸುಗಮಗೊಳಿಸದಿದ್ದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ. ಬರುವ ಶನಿವಾರದ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ರಸ್ತೆ ಸಂಪರ್ಕ ಸುಗಮವಾಗಿರಬೇಕು ಎಂದು ಶಾಸಕರು ತಾಕೀತು ಮಾಡಿದರು.
ಜಿಪಂ ಸಿಇಒ ಡಾ.ಪ್ರವಿಣ್ ಪಿ. ಬಾಗೇವಾಡಿ ಮಾತನಾಡಿ, ಪ್ರಜಾಸೇವಾ ಕಾರ್ಯಕ್ರಮದಲ್ಲಿ ಕೇವಲ ಅರ್ಜಿಗಳನ್ನು ಸ್ವೀಕರಿಸದೆ, ಸರ್ಕಾರದ ವಿವಿಧ ಇಲಾಖೆಗಳ ಯೋಜನೆ ಹಾಗೂ ಸೌಲಭ್ಯಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ಪ್ರತ್ಯೇಕ ಕೌಂಟರ್ಗಳನ್ನು ತೆರೆಯಬೇಕು. ಅನುಭವಿ ಗಣಕಯಂತ್ರ ನಿರ್ವಾಹಕರನ್ನು ನಿಯೋಜಿಸಿ ಒಟಿಪಿ ಹಾಗೂ ಅರ್ಜಿ ಸಲ್ಲಿಕೆ ಪ್ರಕ್ರಿಯೆ ವಿಳಂಬವಿಲ್ಲದೆ ಪೂರ್ಣಗೊಳಿಸಬೇಕು ಎಂದರು.
ಅಧಿಕಾರಿಗಳಿಗೆ ದಂಡದ ಎಚ್ಚರಿಕೆ: ಅಪರ ಜಿಲ್ಲಾಧಿಕಾರಿ ಎಸ್.ಎಂ.ಮಂಗಳಾ ಮಾತನಾಡಿ, ಈ ಕಾರ್ಯಕ್ರಮವನ್ನು "ಸಕಾಲ' ಯೋಜನೆಗೆ ಜೋಡಿಸಲಾಗಿದ್ದು, ನಿಗದಿತ ಕಾಲಮಿತಿಯೊಳಗೆ ಅರ್ಜಿಗಳನ್ನು ಇತ್ಯರ್ಥಪಡಿಸದಿದ್ದರೆ ಅಧಿಕಾರಿಗಳ ವೇತನದಿಂದಲೇ ದಂಡ ವಿಧಿಸಲಾಗುತ್ತದೆ. ಯಾವುದೇ ಕಾರಣಕ್ಕೂ ಅನಗತ್ಯ ಅರ್ಜಿಗಳನ್ನು ತಿರಸ್ಕರಿಸಬಾರದು. ಅನಿವಾರ್ಯ ಸಂದರ್ಭಗಳಲ್ಲಿ ತಹಸೀಲ್ದಾರ್ ಮಟ್ಟದಲ್ಲಿ ಸೂಕ್ತ ಹಿಂಬರಹ ನೀಡಬೇಕು ಎಂದು ಎಚ್ಚರಿಸಿದರು.
ತಾಪಂ ಇಒ ಪ್ರಸಾದ್ ಮಾತನಾಡಿ, ತಾಲೂಕಿನ ಎಲ್ಲ 28 ಗ್ರಾಪಂಗಳಲ್ಲಿ ಸ್ವಚ್ಛತಾ ವಾಹನಗಳ ಮೂಲಕ ಡಂಗೂರ ಹಾಗೂ ಕರಪತ್ರಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಲಾಗುವುದು ಎಂದು ಸಭೆಗೆ ವಿವರಿಸಿದರು.
ಸಭೆಯಲ್ಲಿ ಮಾಲೂರು ತಹಸೀಲ್ದಾರ್ ರೂಪಾ, ಅಪರ ಪೊಲೀಸ್ ವರಿಷ್ಠಾಧಿಕಾರಿ ಎಚ್.ಸಿ.ಜಗದೀಶ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸರಿನಾ ಸಿಕ್ಕಲಿಗರ್, ನಗರಸಭೆ ಪೌರಾಯುಕ್ತರು, ಜಿಲ್ಲಾ ಮತ್ತು ತಾಲೂಕುಮಟ್ಟದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಇದ್ದರು.