ಪ್ರತಿವರ್ಷ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಋತುಮಾನ ಮುನ್ನ ಸಭೆಗಳನ್ನು ನಡೆಸಿ ಕ್ರಿಯಾ ಯೋಜನೆ ಸಿದ್ಧಪಡಿಸುವುದು ಕಡತಗಳಿಗೆ ಸೀಮಿತವಾಗಿವೆ. ಮಾರುಕಟ್ಟೆಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಹಾಳಾಗಿರುವ ರಸ್ತೆಗಳು, ಚರಂಡಿಗಳು, ಕೊಳೆತ ಮಾವಿನಕಾಯಿ ರಾಶಿಗಳು ಹೀಗೆ ಹಲವು ಸಮಸ್ಯೆಗಳ ಮಧ್ಯದಲ್ಲಿಯೇ ಸುಗ್ಗಿಕಾಲ ಕಳೆಯುತ್ತಿದೆ. ಚುನಾಯಿತ ಪ್ರತಿನಿಧಿಗಳ ಮತ್ತು ಅಧಿಕಾರಿಗಳ ಬೇಜವಾಬ್ದಾರಿತನ ಎದ್ದು ಕಾಣುತ್ತಿದೆ.