ಕೋಲುಬಾಣೆ ಕಾವೇರಿ ಅಸೋಸಿಯೇಷನ್ ನಿಂದ ಕೈಲ್ ಪೊಳ್ದ್ ಕ್ರೀಡಾಕೂಟದ ಸಂಭ್ರಮ

MDK05
Published on

ಮಡಿಕೇರಿ: ಕ್ರೀಡೆಯಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ಹೆಚ್ಚಾಗಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಸ್.ಅರುಣ್ ಮಾಚಯ್ಯ ತಿಳಿಸಿದರು.


ಮಾಯಮುಡಿ ಕೋಲುಬಾಣೆಯ ಕಾವೇರಿ ಅಸೋಸಿಯೇಷನ್ ವತಿಯಿಂದ ಕೈಲ್ ಪೊಳ್ದ್ ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಕ್ರೀಡಾಕೂಟ ಮತ್ತು ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಆರೋಗ್ಯ ವೃದ್ಧಿ ಹಾಗೂ ಶಿಸ್ತಿನ ಜೀವನಕ್ಕೆ ಕ್ರೀಡೆ ಸಹಕಾರಿಯಾಗಿದ್ದು, ಕೊಡಗಿನ ಮೂಲ ಸಂಸ್ಕೃತಿಯೊಂದಿಗೆ ಕ್ರೀಡಾಕೂಟಗಳು ಕೂಡ ಉನ್ನತ ಸ್ಥಾನವನ್ನು ಪಡೆದುಕೊಂಡಿರುವುದು ಹೆಮ್ಮೆಯ ವಿಚಾರವೆಂದು ತಿಳಿಸಿದರು.


ತೆಂಗಿನ ಕಾಯಿಗೆ ಗುಂಡುಹೊಡೆಯುವ ಪುರುಷರ ವಿಭಾಗದ ಸ್ಪರ್ಧೆಯಲ್ಲಿ ನಾಮೇರ ಕೆ.ರವಿ ದೇವಯ್ಯ ಪ್ರಥಮ, ಆಪಟ್ಟೀರ ಆರ್.ಆದರ್ಶ್ ಅಯ್ಯಪ್ಪ ದ್ವಿತೀಯ ಹಾಗೂ ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ ತೃತೀಯ ಸ್ಥಾನ ಪಡೆದುಕೊಂಡರು. ಮಹಿಳೆಯರ ವಿಭಾಗದಲ್ಲಿ ಎಸ್.ಎಂ.ಚಂದ್ರಿಕ ಮಂಜುನಾಥ್ ಪ್ರಥಮ, ಎಸ್.ಎಂ.ಪ್ರೇಕ್ಷ ದ್ವಿತೀಯ ಹಾಗೂ ಕಾಳಪಂಡ ಬಿ.ಲತಾ ಬಿದ್ದಪ್ಪ ತೃತೀಯ ಬಹುಮಾನ ಪಡೆದರು.


ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಪ್ರತಿನಿಧಿಸಿ ಭಾರತ ತಂಡವನ್ನು ಮುನ್ನಡೆಸಿದ ಅರುಣ್ ಮಾಚಯ್ಯ ಅವರನ್ನು ಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.


ಅಸೋಸಿಯೇಷನ್ ಅಧ್ಯಕ್ಷ ಕಾಳಪಂಡ ಟಿಪ್ಪು ಬಿದ್ದಪ್ಪರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಎಸ್.ಎನ್.ಸುಕೇಶ್, ಉಪಾಧ್ಯಕ್ಷ ನಾಮೇರ ರವಿ ದೇವಯ್ಯ, ಚೆಪ್ಪುಡೀರ ಕಿಟ್ಟು ಅಯ್ಯಪ್ಪ, ಕ್ರೀಡಾ ಕಾರ್ಯದರ್ಶಿ ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ, ನಿರ್ದೇಶಕ ಆಪಟ್ಟೀರ ಎ.ಬೋಪಣ್ಣ, ಎಸ್.ವಿ.ಮಂಜುನಾಥ್, ಜೆ.ಎಸ್.ಲೋಕೇಶ್, ಬಿ.ಎನ್.ಪ್ರತ್ಯು, ಖಜಾಂಚಿ ಕಾಳಪಂಡ ಸಿ.ನರೇಂದ್ರ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net