ನಿವೇಶನ ಹಕ್ಕುಪತ್ರ ಪರಿಶೀಲಿಸುವಂತೆ ಡಿಸಿ ಸೂಚನೆ

VJP 16-1
Published on

ವಿಜಯಪುರ: ಆಲಮಟ್ಟಿ ಹಿನ್ನೀರಿನಿಂದ ಮುಳುಗಡೆಯಾದ ಕೊಲ್ಹಾರ ವ್ಯಾಪ್ತಿಯ ಅರ್ಹ ಲಾನುಭವಿಗಳಿಗೆ ಪುನರ್ವಸತಿ ಅಂಗವಾಗಿ ನಿವೇಶನ, ಹಕ್ಕುಪತ್ರ ನೀಡಿರುವ ಬಗ್ಗೆ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಕೊಲ್ಹಾರ ಪಪಂ ಅಧಿಕಾರಿ ಮತ್ತು ಸಿಬ್ಬಂದಿ, ತಹಸೀಲ್ದಾರ್,ಉಪವಿಭಾಗಾಧಿಕಾರಿಗಳೊಂದಿಗೆ ಕೊಲ್ಹಾರ ಪಪಂ ಕಚೇರಿಯಲ್ಲಿ ಮಂಗಳವಾರ ಸಭೆ ನಡೆಸಿದ ಅವರು, ಆಲಮಟ್ಟಿ ಹಿನ್ನೀರಿನಿಂದ ಬಾಧಿತವಾದ ಜನರ ಅನುಕೂಲಕ್ಕಾಗಿ ಕೃಷ್ಣಾ ಭಾಗ್ಯ ಜಲನಿಗಮ ಪುನ ರ್ವಸತಿ ಯೋಜನೆಯಡಿ ಅರ್ಹ ಸಂತ್ರಸ್ತತರಿಗೆ ನಿವೇಶನ, ಹಕ್ಕುಪತ್ರ ನೀಡದೆ ಇರುವ ಬಗ್ಗೆ ದೂರುಗಳು ಬಂದಿವೆ. ಹಕ್ಕುಪತ್ರ ವಿತರಣೆಗೆ ಸಂಬಂಧಪಟ್ಟಂತೆ ಆಗಿರುವ ಲೋಪಗಳ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.
ಕೊಲ್ಹಾರ ಪಪಂ ವ್ಯಾಪ್ತಿಯಲ್ಲಿ ಸಾರ್ವಜನಿಕರು ಯಾವುದೇ ನಿವೇಶನ ಖರೀದಿಸುವಾಗ ಆಸ್ತಿಯ ನೈಜತೆಯನ್ನು ಪರಿಶೀಲಿಸಿ ಖರೀದಿ ಮಾಡುವಂತೆ, ಆಸ್ತಿಗೆ ಸಂಬಂಧಪಟ್ಟ ಸೂಕ್ತ ದಾಖಲೆಗಳನ್ನು ಮುಖ್ಯಾಧಿಕಾರಿಗಳಿಗೆ ನೀಡುವಂತೆ ಸೂಚಿಸಿದರು.
ಕೊಲ್ಹಾರ ಪಪಂ ವ್ಯಾಪ್ತಿಯಲ್ಲಿ ಹಕ್ಕುಪತ್ರ ವಿತರಣೆಗೆ ಸಂಬಂಧಪಟ್ಟಂತೆ ಆಗಿರುವ ಲೋಪಗಳ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಲು ಇಬ್ಬರು ಅಧಿಕಾರಿಗಳನ್ನು ನೇಮಿಸಿದ ಡಿಸಿ, ಈ ಕುರಿತು ವರದಿ ಸಲ್ಲಿಸುವಂತೆ ಅವರಿಗೆ ಸೂಚನೆ ನೀಡಿದರು.
ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿಜಯ ಮೆಕ್ಕಳಕಿ, ಎಇಇ ಜುಮನಾಳ ಮತ್ತಿತರರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net