10 ಪೌರ ಕಾರ್ಮಿಕರ ನೇಮಕಾತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

Kolhara Papam Chief, Veeresh Hatti, recruitment of civic workers, proposal,
ಕೊಲ್ಹಾರ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಪೌರಕಾರ್ಮಿಕರಿಗೆ ತಲಾ 7 ಸಾವಿರ ರೂ. ಪ್ರೋತ್ಸಾಹ ಧನ ವಿತರಿಸಲಾಯಿತು. ಮುಖ್ಯಾಧಿಕಾರಿ ವೀರೇಶ ಹಟ್ಟಿ, ಕಲ್ಲಿನಾಥ ದೇವರು, ಎಸ್.ಎಸ್.ನಾಯಕಲ್‌ಮಠ ಇತರರಿದ್ದರು.
Published on

ಕೊಲ್ಹಾರ: ಹಳ್ಳಿ, ಪಟ್ಟಣ, ನಗರ, ಮಹಾನಗರ ಪಾಲಿಕೆಗಳ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡುವಲ್ಲಿ ಪೌರ ಕಾರ್ಮಿಕರ ಶ್ರಮ ಬಹಳಷ್ಟು ಇರುತ್ತದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವೀರೇಶ ಹಟ್ಟಿ ಹೇಳಿದರು.
ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಪೌರ ಕಾರ್ಮಿಕರ ದಿನಾಚರಣೆ ನಿಮಿತ್ತ ಪೌರ ಕಾರ್ಮಿಕರು, ಮಾಧ್ಯಮ ಮಿತ್ರರು, ಗಣ್ಯರು ಹಾಗೂ ಶ್ರೀಗಳಿಗೆ ಶನಿವಾರ ಹಮ್ಮಿಕೊಂಡಿದ್ದ ಸನ್ಮಾನ ಹಾಗೂ ಪೌರಕಾರ್ಮಿಕರಿಗೆ ತಲಾ 7 ಸಾವಿರ ರೂ. ಪ್ರೋತ್ಸಾಹ ಧನ ವಿತರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಕೊಲ್ಹಾರ ಪಟ್ಟಣದಲ್ಲಿ 28 ಪೌರ ಕಾರ್ಮಿಕರ ಅವಶ್ಯಕತೆ ಇದ್ದು, ಸದ್ಯ 18 ಜನ ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನುಳಿದ 10 ಜನರ ನೇಮಕಾತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುಮತಿ ದೊರೆತ ತಕ್ಷಣ ನೇಮಕಾತಿ ಮಾಡಿಕೊಳ್ಳಲಾಗುವುದು. ಪೌರ ಕಾರ್ಮಿಕರಿಗೆ ಆರೋಗ್ಯ ಭಾಗ್ಯ, ಗೃಹ ಭಾಗ್ಯ, ಆಶ್ರಯ ಯೋಜನೆ, ಮಕ್ಕಳ ಶಿಕ್ಷಣ ಹಾಗೂ ಇನ್ನಿತರ ಸರ್ಕಾರಿ ಯೋಜನೆಗಳ ಸೌಲಭ್ಯ ದೊರಕಿಸಿಕೊಡಲಾಗಿದೆ ಎಂದು ಹೇಳಿದರು.
ಪಟ್ಟಣದ ಸ್ವಚ್ಚತಾ ರಾಯಭಾರಿಯಾದ ದಿಗಂಬರೇಶ್ವರ ಸಂಸ್ಥಾನ ಮಠದ ಕಲ್ಲಿನಾಥ ದೇವರು, ಆಡಳಿತಾಧಿಕಾರಿ- ತಹಸೀಲ್ದಾರ್ ಎಸ್.ಎಸ್.ನಾಯಕಲ್‌ಮಠ, ಪಟ್ಟಣ ಪಂಚಾಯಿತಿ ಸದಸ್ಯರಾದ ಚನಮಲ್ಲಪ್ಪ ಗಿಡ್ಡಪ್ಪಗೋಳ, ನಿಂಗಪ್ಪ ಗಣಿ, ಶ್ರೀಶೈಲ ಮುಳವಾಡ, ವಿಜಯಮಹಾಂತೇಶ ಗಿಡ್ಡಪ್ಪಗೋಳ, ತೌಶೀಪ ಗಿರಗಾಂವಿ, ದಸ್ತಗೀರ ಕಲಾದಗಿ, ಆಶಾ ಬಾಲಗೊಂಡ, ಲಕ್ಷ್ಮೀಬಾಯಿ ಹೆರಕಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net