

ಕೊಳ್ಳೇಗಾಲ: ತಾಲೂಕಿನ ಕೊಂಗರಹಳ್ಳಿ ಗ್ರಾಮದ ಅಂಗಡಿ ಮುಂದೆ ಸೋಮವಾರ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತನನ್ನು ಯಳಂದೂರು ತಾಲೂಕಿನ ಕಂದಹಳ್ಳಿ ನಿವಾಸಿ ಬಸವರಾಜು (35) ಎಂದು ಗುರುತಿಸಲಾಗಿದೆ. ಈತನ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೇಲ್ನೋಟಕ್ಕೆ ಅತಿ ಮದ್ಯಪಾನದಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.