

ಕೊಳ್ಳೇಗಾಲ: ತಾಲೂಕಿನ ವಿವಿಧೆಡೆ ಗುರುವಾರ 78ನೇ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
ಪಟ್ಟಣದ ನಗರಸಭೆ ಮುಂಭಾಗ ಶಾಸಕ ಎ.ಆರ್.ಕೃಷ್ಣಮೂರ್ತಿ ಧ್ವಜಾರೋಹಣ ನೆರವೇರಿಸಿದರು. ನಗರಸಭೆ ಆಯುಕ್ತ ಎ.ರಮೇಶ್, ಸದಸ್ಯರು, ಸಿಬ್ಬಂದಿ ಇದ್ದರು. ಪಟ್ಟಣ ಪೊಲೀಸ್ ಠಾಣೆ, ಗ್ರಾಮಾಂತರ ಪೊಲೀಸ್ ಠಾಣೆ, ಅಬಕಾರಿ ನಿರೀಕ್ಷಕರ ಕಚೇರಿ, ತಾಲೂಕು ಪಂಚಾಯಿತಿ, ಲೋಕೋಪಯೋಗಿ ಇಲಾಖೆ ಸೇರಿದಂತೆ ಸರ್ಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.
ಶ್ರೀ ಮಹದೇಶ್ವರ ಪ್ರಥಮ ದರ್ಜೆ ಕಾಲೇಜು, ಶ್ರೀ ವಾಸವಿ ವಿದ್ಯಾ ಕೇಂದ್ರ, ಶ್ರೀ ವಿಶ್ವಚೇತನ ಸಮೂಹ ವಿದ್ಯಾಸಂಸ್ಥೆ, ಮಾನಸ ಶಿಕ್ಷಣ ಸಂಸ್ಥೆ, ಜೆಎಸ್‌ಎಸ್ ಕಾಲೇಜಿನಲ್ಲಿ ರಾಷಧ್ವಜ ಆರೋಹಣ ಮಾಡಲಾಯಿತು.