

ಕೊಳ್ಳೇಗಾಲ: ತಾಲೂಕಿನ ಕುಂತೂರು ಗ್ರಾಮ ಹಾಗೂ ಮೈಸೂರು ನಗರದಲ್ಲಿರುವ ಶ್ರೀ ವೀರಸಿಂಹಾಸನ ಮಠದ ಶ್ರೀ ಗುರುಶಾಂತ ಮಲ್ಲಿಕಾರ್ಜುನಸ್ವಾಮಿ ಉಚಿತ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
5ನೇ ತರಗತಿಯಿಂದ ಪಿಯುಸಿ, ಡಿಪ್ಲೊಮಾ ವಿದ್ಯಾಭ್ಯಾಸ ಮಾಡುವ ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಶ್ರೀ ಶಿವಪ್ರಭು ಸ್ವಾಮೀಜಿ ಮೊ.9481532019, ಶ್ರೀಬಸವಲಿಂಗ ಸ್ವಾಮೀಜಿ ಮೊ. 9945415022, ಎಂ.ಶಿವಮೂರ್ತಿ ಮೊ. 9448075288 ಹಾಗೂ ಗುರುಪಾದ ಸ್ವಾಮಿ ಮೊ. 9743545515 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಶ್ರೀಮಠವು ಪ್ರಕಟಣೆಯಲ್ಲಿ ತಿಳಿಸಿದೆ.