

ಕೊಳ್ಳೇಗಾಲ: ತಾಲೂಕಿನ ಶಿವನಸಮುದ್ರ ದರ್ಗಾ ಸಮೀಪದ ವಕ್ಫ್ ಮಂಡಳಿ ಹಿಂಭಾಗದಲ್ಲಿ ಸುಮಾರು 45 ರಿಂದ 50 ವರ್ಷ ವಯಸ್ಸಿನ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ.
ಈ ಬಗ್ಗೆ ಮಾಹಿತಿ ತಿಳಿದ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಚಾಮರಾಜನಗರ ಅಪರ ಪೊಲೀಸ್ ವರಿಷ್ಠಾಧಿಕಾರಿ ಉದೇಶ್, ಡಿವೈಎಸ್ಪಿ ಧರ್ಮೇಂದ್ರ ಸಿಪಿಐ ಶಿವಮಾದಯ್ಯ, ಪಿಎಸ್‌ಐ ಗಣೇಶ್ ಸ್ಥಳಕ್ಕೆ ಭೇಟಿ ನೀಡಿ ಘಟನೆ ಸಂಬಂಧ ಅಗತ್ಯ ಮಾಹಿತಿ ಪಡೆದರು. ಅಲ್ಲದೆ ಶ್ವಾನದಳದ ತಂಡ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿತು. ಮೃತ ಮಹಿಳೆ ಹಸಿರು ಬಣ್ಣದ ಚೂಡಿಧಾರ್ ಧರಿಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.