

ಕೊಳ್ಳೇಗಾಲ: ಪಟ್ಟಣದ ವಕೀಲರ ಸಭಾಂಗಣದಲ್ಲಿ ಬುಧವಾರ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಅಭಿಯೋಜನೆ ಇಲಾಖೆ ಕೊಳ್ಳೇಗಾಲ, ಮೈಸೂರು ನಾರಾಯಣ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.
ಶಿಬಿರಕ್ಕೆ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಸಿ. ಶ್ರೀಕಾಂತ್ ಚಾಲನೆ ನೀಡಿದರು. ಈ ವೇಳೆ ನ್ಯಾಯಾಧೀಶರು, ವಕೀಲರು ಹಾಗೂ ನ್ಯಾಯಾಲಯದ ಸಿಬ್ಬಂದಿ ಹೃದಯ ರೋಗ ತಪಾಸಣೆ, ರಕ್ತದ ಒತ್ತಡ, ರಕ್ತ ಪರೀಕ್ಷೆ, ಸಕ್ಕರೆ ಕಾಯಿಲೆ ತಪಾಸಣೆ ಮಾಡಿಸಿಕೊಂಡರು.
ಈ ವೇಳೆ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಡಾ.ಪೂರ್ಣಿಮಾ ಮಾತನಾಡಿ, ಹೃದಯ ರೋಗಕ್ಕೆ ಸಂಬಂಧಪಟ್ಟಂತೆ ಸಲಹೆ ಸೂಚನೆ ನೀಡಿದರು. ಶಿಬಿರದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಸುನೀತಾ, ಪ್ರಧಾನ ಸಿವಿಲ್ ನ್ಯಾಯಾಧೀಶೆ ಎಂ.ಎನ್. ನಂದಿನಿ, ಸಹಾಯಕ ಸರ್ಕಾರಿ ಅಭಿಯೋಜಕ ವನಜಾಕ್ಷಿ, ವಕೀಲ ಸಂಘದ ಅಧ್ಯಕ್ಷ ಸಿ.ರವಿ, ಉಪಾಧ್ಯಕ್ಷ ಸಿ.ಆರ್. ನಿರ್ಮಲಾ, ಕಾರ್ಯದರ್ಶಿ ಸಿ.ಬಿ.ಮಹೇಶ್ ಕುಮಾರ್, ಹಿರಿಯ ವಕೀಲ ಎನ್. ರಾಧಾಕೃಷ್ಣ, ರವಿಕುಮಾರ್, ಮಾದಪ್ಪ ಹಾಗೂ ನ್ಯಾಯಾಲಯದ ಸಿಬ್ಬಂದಿ ಹಾಗೂ ಆಸ್ಪತ್ರೆಯ ಸಿಬ್ಬಂದಿ ಇದ್ದರು.