ಕುರುಬನಕಟ್ಟೆಯಲ್ಲಿ ಹೆಬ್ಬಾವು ರಕ್ಷಣೆ

19-kollegal-3,,,
Published on

ಕೊಳ್ಳೇಗಾಲ: ತಾಲೂಕಿನ ಕುರುಬನಕಟ್ಟೆ ಸಮೀಪದ ಮಾವಿನ ತೋಟದಲ್ಲಿ ಶುಕ್ರವಾರ ಹೆಬ್ಬಾವು ಪ್ರತ್ಯಕ್ಷವಾಗಿದ್ದು, ಉರಗ ರಕ್ಷಕ ಸ್ನೇಕ್ ಬಾಬು ಹಿಡಿದು ರಕ್ಷಣೆ ಮಾಡಿದ್ದಾರೆ.

ಬೆಳಗ್ಗೆ ಅರಸು ಎಂಬುವರ ಮಾವಿನ ತೋಟದಲ್ಲಿ ಹೆಬ್ಬಾವು ಕಾಣಿಸಿಕೊಂಡಿದೆ. ನಂತರ, ಸ್ನೇಕ್ ಬಾಬು ಅವರಿಗೆ ರೈತರು ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಸ್ನೇಕ್ ಬಾಬು ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ನಂತರ ಅರಣ್ಯ ಇಲಾಖೆ ಅಧಿಕಾರಗಳ ನಿರ್ದೇಶನದಂತೆ ಕಾಡಿಗೆ ಬಿಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net