ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

application
Published on

ಕೊಳ್ಳೇಗಾಲ: ತಾಲೂಕು ವಿಶ್ವಕರ್ಮ ಸಮಾಜದ ವತಿಯಿಂದ 2023-24 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಬಿಎಸ್ಸಿ, ಎಂ.ಕಾಂ, ಎಂ.ಎಸ್ಸಿ, ಇಂಜಿನಿಯರಿಂಗ್, ಮೆಡಿಕಲ್ ಇತರ ಪದವಿ ವ್ಯಾಸಂಗದಲ್ಲಿ ಶೇ.70ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿಶ್ವಕರ್ಮ ಸಮಾಜದ ಕಾರ್ಯದರ್ಶಿ ಮುಳ್ಳೂರು ಪಿ.ಸಿದ್ದಪ್ಪಾಜಿ ತಿಳಿಸಿದ್ದಾರೆ.

ಆಸಕ್ತ ವಿದ್ಯಾರ್ಥಿಗಳು ಅಂಕಪಟ್ಟಿ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, 1 ಪಾಸ್‌ಪೋರ್ಟ್ ಸೈಜ್ ಫೋಟೋ, ಚಾಲ್ತಿಯಲ್ಲಿರುವ ದೂರವಾಣಿ ಸಂಖ್ಯೆ ನೀಡಬೇಕೆಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಜು.31ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ. 9606617454, 9916445500, 9141443551, 7204918274 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net