ಪಾಲಕರು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲಿ

26-kollegal-5
Published on

ಕೊಳ್ಳೇಗಾಲ: ಶಿಕ್ಷಣ ಪಡೆಯುವುದು ಪ್ರತಿ ಮಗುವಿನ ಹಕ್ಕಾಗಿದ್ದು, ಪಾಲಕರು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಬಿಆರ್‌ಸಿ ಮಹದೇವ್ ಕುಮಾರ್ ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಲಯನ್ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಗುರುವಾರ ಪಟ್ಟಣದ ಲಯನ್ ಶಿಕ್ಷಣ ಸಂಸ್ಥೆಯಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ಆಯೋಜಿಸಿದ್ದ ಭಾಷಾ ಕೌಶಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಭಾಷಾ ಶಿಕ್ಷಕರು ಮಕ್ಕಳ ಕಲಿಕೆ ಮೇಲೆ ವಿಶೇಷ ಕಾಳಜಿ ವಹಿಸಸಬೇಕಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್‌ನ ತಾಲೂಕು ಅಧ್ಯಕ್ಷ ಎಸ್. ನಾಗರಾಜು ಕೊಂಗರಹಳ್ಳಿ ಮಾತನಾಡಿ, 2023-24 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ನಮ್ಮ ಜಿಲ್ಲೆ 24ನೇ ಸ್ಥಾನಕ್ಕೆ ಇಳಿದಿದೆ. ಮುಂದಿನ ಸಾಲಿನಲ್ಲಿ ಉತ್ತಮ ಸ್ಥಾನಕ್ಕೆ ಕೊಂಡೊಯ್ಯಲು ಎಲ್ಲರೂ ಶ್ರಮಿಸಬೇಕು ಎಂದರು. ನಿವೃತ್ತ ಡಿಡಿಪಿಐ ಪಿ.ಮಂಜುನಾಥ್, ಸಂಪನ್ಮೂಲ ಶಿಕ್ಷಕರಾದ ಚಾಮರಾಜು, ದೊರೆಸ್ವಾಮಿ ಆನಂದರಾಜು ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net