ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು

Crime Logo
Published on

ಕೊಳ್ಳೇಗಾಲ: ತಲೆನೋವು ತಾಳಲಾರದೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಸಂಜೆ ಮೃತಪಟ್ಟಿದ್ದಾರೆ.

ತಾಲೂಕಿನ ಕಾಮಗೆರೆ ಗ್ರಾಮದ ನಿವಾಸಿ ಮಾದೇಶ ಎಂಬುವರ ಪತ್ನಿ ಮಹದೇವಮ್ಮ (36) ಮೃತ ದುರ್ದೈವಿ. ಈಕೆ ಹಲವಾರು ದಿನಗಳಿಂದ ತಲೆನೋವಿನಿಂದ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರೂ ಗುಣವಾಗಿರಲಿಲ್ಲ. ಹಾಗಾಗಿ, ತಲೆ ನೋವು ತಾಳಲಾಗದೆ ಶುಕ್ರವಾರ ಬೈಕ್‌ನಲ್ಲಿದ್ದ ಪೆಟ್ರೋಲ್ ತೆಗೆದುಕೊಂಡು ಮಹದೇವಮ್ಮ ಮೈ ಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ಪರಿಣಾಮ ದೇಹವು ಸುಟ್ಟ ಗಾಯ ವಾಗಿತ್ತು. ನಂತರ, ಸಂಬಂಧಿಕರು ಚಿಕಿತ್ಸೆಗಾಗಿ ಕೊಳ್ಳೇಗಾಲದ ಉಪವಿಭಾಗ ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರದೃಷ್ಟವಶಾತ್ ಶನಿವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಮಹದೇವಮ್ಮ ಮೃತ ಪಟ್ಟಿದ್ದಾರೆ. ಈ ಸಂಬಂಧ ಮಹದೇವಮ್ಮ ಅವರ ಅತ್ರೆ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net